ಕಚ್ಚೂರು ಶ್ರೀ ಮಾಲ್ತಿದೇವಿ ದೇವಸ್ಥಾನ, ಶ್ರೀ ಬಬ್ಬುಸ್ವಾಮಿ ಮೂಲ ಕ್ಷೇತ್ರ: ವಾರ್ಷಿಕ ಜಾತ್ರಾ ಮಹೋತ್ಸವ, ಕೆಂಡೋತ್ಸವ ಸಂಪನ್ನ.

ಬಾರಕೂರು: ಕಚ್ಚೂರು ಶ್ರೀ ಮಾಲ್ತಿದೇವಿ ದೇವಸ್ಥಾನ, ಶ್ರೀ ಬಬ್ಬುಸ್ವಾಮಿ ಮೂಲ ಕ್ಷೇತ್ರದ ವಾರ್ಷಿಕ ಜಾತ್ರಾ ಮಹೋತ್ಸವ ಹಾಗೂ ಕೆಂಡೋತ್ಸವ ವಿಜೃಂಭಣೆಯಿಂದ ಜರುಗಿತು.

ಸಂಜೆ ಬೈಲಕೆರೆ ದೀಪೋತ್ಸವ, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ, ಭಕ್ತಿಗಾನ ಮಂಜರಿ, ಬಲಿ ಮೂರ್ತಿ
ಉತ್ಸವ, ಗಾನ ನೃತ್ಯ ವೈಭವ, ಯಕ್ಷಗಾನ ಜರಗಿತು.

ಸಾಮೂಹಿಕ ವಿವಾಹ, ಮಧ್ಯಾಹ್ನ ಧಾರ್ಮಿಕ ಸಭೆ, ಪ್ರತಿಭಾ ಪುರಸ್ಕಾರ, ಸಹಾಯಧನ ವಿತರಣೆ, ಅನ್ನಸಂತರ್ಪಣೆ, ಸಂಜೆ ರಥೋತ್ಸವ, ರಾಜ್ಯಮಟ್ಟದ ತಂಡದಿಂದ, ಜನಪದ ಸಂಗೀತ, ತೆಪ್ಪೋತ್ಸವ ಜರಗಿತು.

ಜಾತ್ರಾ ಮಹೋತ್ಸವದಲ್ಲಿ ಸಾವಿರಾರು ಮಂದಿ ಭಕ್ತರು ದೇವರ ದರ್ಶನವನ್ನು ಕಣ್ತುಂಬಿ ಕೊಂಡರು.

Oplus_131072
Oplus_131072