ಕಮಲಶಿಲೆ: ಇಂದು ಶಿಲಾಮಯ ರಾಜಗೋಪುರ ಲೋಕಾರ್ಪಣೆ.

ಶ್ರೀ ಕ್ಷೇತ್ರ ಕಮಲಶಿಲೆ ಶ್ರೀ ಬಾಹ್ಮೀ ದುರ್ಗಾಪರಮೇಶ್ವರೀ ದೇವಸ್ಥಾನದ ಮುಂಭಾಗದಲ್ಲಿ ನೂತನವಾಗಿ ಶಿಲಾಮಯ ರಾಜಗೋಪುರ ಲೋಕಾರ್ಪನ ಮತ್ತು ಬ್ರಹ್ಮ ಕುಂಭಾಭಿಷೇಕವು ಎ.24ರ ಬುಧವಾರ ವಿವಿಧ ವಿಧಿ ವಿಧಾನ, ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜರಗಲಿದೆ.
ರಾಜಗೋಪುರವನ್ನು ಶೃಂಗೇರಿ ಜಗದ್ಗುರು ಶ್ರೀ ಭಾರತೀ ತೀರ್ಥ ಮಹಾಸ್ವಾಮಿಗಳವರ ತತ್ಕರಕಮಲ ಸಂಜಾತ ಜಗದ್ಗುರು ಶ್ರೀ ವಿಧುಶೇಖರ ಭಾರತೀ ಮಹಾಸ್ವಾಮಿಗಳಿಂದ ಲೋಕಾರ್ಪಣೆ ಗೊಳ್ಳಲಿದ್ದು, ಅದಕ್ಕಿಂತ ಮೊದಲು ಶ್ರೀ ಬ್ರಾಹೀದುರ್ಗಾಪರಮೇಶ್ವರೀ ಅಮ್ಮನವರಿಗೆ ಬ್ರಹ್ಮಕುಂಭಾಭಿಷೇಕ ನೆರವೇರಿಸಲಿದ್ದಾರೆ.
ಬೆಳಗ್ಗೆ 9ಕ್ಕೆ ಜಗದ್ಗುರುಗಳ ಆಗಮನ, ಪೂರ್ಣಕುಂಭ ಸ್ವಾಗತ. 9.30ಕ್ಕೆ ಅಮ್ಮನವರಿಗೆ ಬ್ರಹ್ಮಕುಂಭಾಭಿಷೇಕ. 10ಕ್ಕೆ ರಾಜಗೋಪುರ ಲೋಕಾರ್ಪಣೆ ಕಾರ್ಯಕ್ರಮ, 11ಕ್ಕೆ ಧಾರ್ಮಿಕ ಸಭಾ ಕಾರ್ಯಕ್ರಮ. ಧೂಳಿಪಾದಪೂಜೆ, ಸಂಘ ಸಂಸ್ಥೆಗಳಿಂದ ಜಗದ್ಗುರುಗಳಿಗೆ ಫಲಪುಷ್ಪ ಸಮರ್ಪಣೆ. ಅನಂತರ ಜಗದ್ಗುರುಗಳಿಂದ ಅನುಗ್ರಹ ಭಾಷಣ ಮತ್ತು ಭಕ್ತರಿಗೆ ಫಲಮಂತ್ರಾಕ್ಷತೆ ನೀಡಲಿದ್ದಾರೆ.