ಕರಾವಳಿಗೆ ಬಜೆಟ್ ನಲ್ಲಿ ಸಿಎಂ ಸಿದ್ದರಾಮಯ್ಯ ಕೊಟ್ಟಿದ್ದೇನು?ಇಲ್ಲಿದೆ ಮಾಹಿತಿ.

► ಮಂಗಳೂರಿನಲ್ಲಿರುವ ಮೀನುಗಾರಿಕೆ ಕಾಲೇಜು ವಿದ್ಯಾರ್ಥಿಗಳ ಸಂಖ್ಯಾ ಬಲ ದ್ವಿಗುಣ.

► ಕರಾವಳಿ ಜಿಲ್ಲೆಗಳಲ್ಲಿರುವ ಮೀನುಗಾರಿಕೆ ಕೊಂಡಿ ರಸ್ತೆಗಳ ಅಭಿವೃದ್ಧಿಗೆ 30 ಕೋಟಿ ರೂ.

► ಪರಿಶಿಷ್ಟ ಜಾತಿ /ಪರಿಶಿಷ್ಟ ಪಂಗಡದ ಮೀನು ಮಾರಾಟಗಾರರಿಗೆ ನಾಲ್ಕು ಚಕ್ರ ವಾಹನ ಖರೀದಿಗೆ ಗರಿಷ್ಠ 3 ಲಕ್ಷ ರೂ. ಆರ್ಥಿಕ ನೆರವು.

► ಮೋಟರೀಕೃತ ದೋಣಿಗಳಲ್ಲಿ 15 ವರ್ಷ ಮೀರಿದ ಇಂಜಿನ್ ಬದಲಾವಣೆಗೆ ಗರಿಷ್ಠ ಒಂದು ಲಕ್ಷ ರೂ. ಸಹಾಯಧನ.

► ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮಲ್ಟಿ ಲೆವಲ್ ಪಾರ್ಕಿಂಗ್ ವ್ಯವಸ್ಥೆ ನಿರ್ಮಾಣ.

► ಆಳ ಸಮುದ್ರ ಮೀನುಗಾರಿಕೆಗೆ ಪ್ರೋತ್ಸಾಹಿಸಲು ಮೀನುಗಾರಿಕೆ ದೋಣಿಗಳ ಉದ್ದದ ಮಿತಿ ಸಡಿಲಿಸಲು ಕ್ರಮ

► ರಾಜ್ಯದಲ್ಲಿ ಹೊಸ ಮೀನುಗಾರಿಕಾ ನೀತಿ ಜಾರಿ

► ಬಯಲುಸೀಮೆ, ಮಲೆನಾಡು ಹಾಗೂ ಕರಾವಳಿ ಪ್ರದೇಶಾಭಿವೃದ್ಧಿ ಮಂಡಳಿಗಳಿಗೆ 83 ಕೋಟಿ ರೂ. ಅನುದಾನ.

► ಕಡಲು ಕೊರೆತ ತಡೆಗಟ್ಟಲು ಶೋರ್‌ಲೈನ್ ಮ್ಯಾನೇಜ್ಮೆಂಟ್ ಪ್ಲಾನ್ ಪ್ರಕಾರ ಹಂತಹಂತವಾಗಿ ಕಾಮಗಾರಿ ಅನುಷ್ಠಾನ.

► ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕಡಲ ತೀರದ ಅಭಿವೃದ್ಧಿ ಹಾಗೂ ರಸ್ತೆಬದಿ ಸೌಲಭ್ಯಗಳನ್ನು (ಹೈವೇ ಹಬ್ಸ್) ಉನ್ನತೀಕರಿಸಲು ಕ್ರಮ.

► ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಜಿಲ್ಲಾ ಕ್ರೀಡಾಂಗಣ ಅಭಿವೃದ್ಧಿಗೆ 6 ಕೋಟಿ ರೂ.

► ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ 200 ಕೋಟಿ ರೂ. ವೆಚ್ಚದಲ್ಲಿ ಭೂ ಕುಸಿತ ತಡೆ ಕಾರ್ಯಕ್ರಮ.

► ಸಮುದ್ರ ಕೊರೆತ ತಪ್ಪಿಸಲು 200 ಕೋಟಿ ರೂ. ಯೋಜನೆ.