ಕಾಪು: ಸಾಮಾಜಿಕ, ಧಾರ್ಮಿಕ ಮತ್ತು ಸಹಕಾರಿ ಧುರೀಣ ಬಾಲಂ ವಿಶ್ವನಾಥ್ ರಾವ್ (83) ಸೋಮವಾರ (ಡಿ.16) ಬೆಂಗಳೂರಿನಲ್ಲಿರುವ ಪುತ್ರನ ಮನೆಯಲ್ಲಿ ನಿಧನ ಹೊಂದಿದರು. ಮೃತರು ಪತ್ನಿ, ಇಬ್ಬರು ಪುತ್ರರು ಮತ್ತು ಇಬ್ಬರು ಪುತ್ರಿಯರ ಅಗಲಿದ್ದಾರೆ.
ಎಲ್ಲೂರು ಶ್ರೀ ವಿಶ್ವೇಶ್ವರ ದೇವಸ್ಥಾನದ ಮೊಕ್ತೇಸರರಾಗಿ, ಬೆಳಪು ಗ್ರಾಮ ಪಂಚಾಯತ್, ಬೆಳಪು ವ್ಯವಸಾಯ ಸಹಕಾರಿ ಸಂಘ, ಬೆಳಪು ಹಾಲು ಉತ್ಪಾದಕರ ಸಹಕಾರಿ ಸಂಘದ ಮಾಜಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಅವರು ಉಡುಪಿ ಎಪಿಎಂಸಿ, ಪಣಿಯೂರು ಶ್ರೀ ದುರ್ಗಾ ದೇವಿ ಹಿರಿಯ ಪ್ರಾಥಮಿಕ ಶಾಲೆಯ ಆಡಳಿತ ಮಂಡಳಿಯ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದರು.












