ಕಾರ್ಕಳ: ಕಾರುಗಳ ನಡುವೆ ಅಪಘಾತ – ಮಹಿಳೆ ಮೃತ್ಯು

ಕಾರ್ಕಳ: ನಂದಳಿಕೆ ಗ್ರಾಮದ ಮಾವಿನಕಟ್ಟೆ ಎಂಬಲ್ಲಿ ಕಾರುಗಳ ನಡುವೆ ಅಪಘಾತ ಉಂಟಾದ ಪರಿಣಾಮ ಮಹಿಳೆಯೋರ್ವರು ಮೃತಪಟ್ಟ ಘಟನೆ ಜ. 25ರ ಸಂಜೆ ಸಂಭವಿಸಿದೆ.

ಕಾರ್ಕಳ-ಪಡುಬಿದ್ರೆ ರಾಜ್ಯ ಹೆದ್ದಾರಿಯಲ್ಲಿ ಕಾರ್ಕಳ ಕಡೆಯಿಂದ ಬೆಳ್ಮಣ್ ಕಡೆಗೆ ಸಾಗುತ್ತಿದ್ದ ಕಾರು, ಬೆಳ್ಮಣ್ ಕಡೆಯಿಂದ ಕಾರ್ಕಳ ಕಡೆಗೆ ಬರುತ್ತಿದ್ದ ಕಾರಿನ ಬಲ ಬದಿಯ ಡೋರ್‌ಗೆ ಡಿಕ್ಕಿ ಹೊಡೆದಿದೆ.

ಅಪಘಾತದ ಪರಿಣಾಮವಾಗಿ ಕಾರಿನಲ್ಲಿದ್ದ ಮರಿಯಾ ಫೆರ್ನಾಂಡೀಸ್ (60) ಗಾಯಗೊಂಡಿದ್ದರು. ಗಾಯಾಳು ಮರಿಯ ಅವರನ್ನು ಚಿಕಿತ್ಸೆಗಾಗಿ ಮಣಿಪಾಲ ಕೆ.ಎಂ.ಸಿ. ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಿರುತ್ತಾರೆ.

ಈ ಕುರಿತು ಕಾರ್ಕಳ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.