ಕಾರ್ಕಳ: ಕುಶನ್ ಅಂಗಡಿಯಲ್ಲಿ ಬೆಂಕಿ ಅವಘಡ; ತಪ್ಪಿದ ಭಾರಿ ಅನಾಹುತ

ಉಡುಪಿ: ಕಾರ್ಕಳದ ಆನೆಕೆರೆ ಪರಿಸರದ ಕಟ್ಟಡವೊಂದರಲ್ಲಿ ಗುರುವಾರ ರಾತ್ರಿ ಅಗ್ನಿ ಅವಘಡ ಸಂಭವಿಸಿದ್ದು, ಕ್ಷಣ ಮಾತ್ರದಲ್ಲಿ ಬೆಂಕಿಯ ಕೆನ್ನಾಲಿಗೆ ಇಡೀ ಕಟ್ಟಡವನ್ನೇ ಆವರಿಸಿಕೊಂಡಿದೆ.

ಉದ್ಯಮಿ ಗಣಪತಿ ಹೆಗ್ಡೆ ಒಡೆತನದ ಕುಶನ್ ವರ್ಕ್ಸ್ ಅಂಗಡಿಯಲ್ಲಿ ಈ ಘಟನೆ ಸಂಭವಿಸಿದೆ. ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಇಲಾಖೆಯ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದರು. ಇದರಿಂದ ದೊಡ್ಡ ಅನಾಹುತವೊಂದು ತಪ್ಪಿದಂತಾಗಿದೆ.

.