ಕಾರ್ಕಳ: ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ

ಕಾರ್ಕಳ: ತೀರ್ಥಹಳ್ಳಿ ತಾಲೂಕಿನ ಬೆಟ್ಟಮಕ್ಕಿಯ ಮನೆಯೊಳಗೆ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಶವ ಫೆ.20 ರಂದು ಪತ್ತೆಯಾಗಿದೆ.

ಮೃತ ಯುವತಿಯನ್ನು ಶ್ರೀನಿಧಿ (24) ಎಂದು ಗುರುತಿಸಲಾಗಿದೆ.

ಇವರು ಮೂಲತ: ಕಾರ್ಕಳ ತಾಲೂಕಿನ ಕುಕ್ಕುಂದೂರು ಗ್ರಾಮದ ಕುದುರುನಬೆಟ್ಟು ನಿವಾಸಿಯಾಗಿದ್ದು, ಒಂದು ವರ್ಷದ ಹಿಂದೆ ಬೆಟ್ಟಮಕ್ಕಿಯ ಸುದೀಪ್ ಶೆಟ್ಟಿ ಜತೆ ವಿವಾಹವಾಗಿದ್ದರು. ಶ್ರೀನಿಧಿ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಈ ಕುರಿತು ತೀರ್ಥಹಳ್ಳಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.