ಕಾರ್ಕಳ: ಪಳ್ಳಿಯಲ್ಲಿ ಇಸ್ಪೀಟ್ ಜುಗಾರಿ ಅಡ್ಡೆಗೆ ಪೊಲೀಸರ ದಾಳಿ – ಮೂವರ ಬಂಧನ

ಕಾರ್ಕಳ: ಸಾರ್ವಜನಿಕ ಸ್ಥಳದಲ್ಲಿ ಹಣ ಪಣವಾಗಿಟ್ಟು ಜುಗಾರಿ ಆಟದಲ್ಲಿ ನಿರತರಾಗಿದ್ದ ಮೂವರನ್ನು ಕಾರ್ಕಳ ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಕಾರ್ಕಳ ನಗರ ಠಾಣೆಯ ಪೊಲೀಸ್‌ ಉಪನಿರೀಕ್ಷಕ ಸಂದೀಪ್‌ ಕುಮಾರ್‌ ಶೆಟ್ಟಿಯವರು ಪಳ್ಳಿ ಶಾಲಾ ಬಳಿ ಸಾರ್ವಜನಿಕ ಸ್ಥಳದಲ್ಲಿ ಕೆಲವು ವ್ಯಕ್ತಿಗಳು ಹಣ ಪಣವಾಗಿಟ್ಟು ಇಸ್ಪೀಟು ಜುಗಾರಿ ಆಟ ಆಡುತ್ತಿದ್ದ ಸ್ಥಳಕ್ಕೆ ಖಚಿತ ಮಾಹಿತಿ ಮೇರೆಗೆ ದಾಳಿಯನ್ನು ನಡೆಸಿದ್ದರು.

ಲೋಕೇಶ್‌, ವೇಲು ಮುರುಗನ್ ಮತ್ತು ರಂಗನಾಥ್‌ ಎಂಬವರನ್ನು ವಶಕ್ಕೆ ಪಡೆದಿದ್ದು, ಅವರಿಂದ ಆಟಕ್ಕೆ ಬಳಸುತ್ತಿದ್ದ 5,500 ರೂ. ನಗದು, ಇಸ್ಪೀಟ್‌ ಎಲೆಗಳು, ಹಳೆಯ ದಿನಪತ್ರಿಕೆಯನ್ನು ಸ್ವಾಧೀನಪಡಿಸಿಕೊಂಡಿದ್ದಾರೆ.

ಈ ಬಗ್ಗೆ ಕಾರ್ಕಳ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.