ಕಾರ್ಕಳ: ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆಗೆ ಶರಣು.

ಕಾರ್ಕಳ : ಕಾರ್ಕಳ ತಾಲೂಕಿನ ಮರ್ಣೆ ಗ್ರಾಮದ ಎಣ್ಣೆಹೊಳೆಯಲ್ಲಿ ಜೀವನದಲ್ಲಿ ಜಿಗುಪ್ಸೆಗೊಂಡು ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮರ್ಣೆ ಗ್ರಾಮದಲ್ಲಿ ಸಂಭವಿಸಿದೆ. ರಾಜು ಮೂಲ್ಯ(62) ಆತ್ಮಹತ್ಯೆಗೆ ಶರಣಾದವರು. ಮೇ 19 ರ ರಾತ್ರಿಯಿಂದ 20ರ ಬೆಳಿಗ್ಗೆ 7:30 ಗಂಟೆಯ ಮದ್ಯಾವಧಿಯಲ್ಲಿ ಇವರು ಮನೆ ಹತ್ತಿರ ಇರುವ ಹಾಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಅಜೆಕಾರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.