ಉಡುಪಿ: ಕಾರ್ಕಳ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ನಡೆಯಲಿರುವ ರಥೋತ್ಸವ ಕಾರ್ಯಕ್ರಮಗಳ ಪ್ರಯುಕ್ತ
ಮೇ 2 ರಂದು ಸಂಜೆ 4 ಗಂಟೆಯಿಂದ ಮೇ 3 ರ ಬೆಳಗ್ಗೆ 6 ಗಂಟೆಯವರೆಗೆ ಮೂರು ಮಾರ್ಗದಿಂದ ಸ್ಟೇಟ್ ಬ್ಯಾಂಕ್ ಜಂಕ್ಷನ್‌ವರೆಗೆ ವಾಹನ ಸಂಚಾರ ನಿಷೇಧಿಸಿ, ಪರ್ಯಾಯ ಸಂಚಾರ ವ್ಯವಸ್ಥೆ ಕಲ್ಪಿಸಿ ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಆದೇಶಿಸಿರುತ್ತಾರೆ.
ಈ ಸಂದರ್ಭದಲ್ಲಿ ಘನವಾಹನಗಳು ಬಂಗ್ಲೆಗುಡ್ಡೆ-ಹಿರಿಯಂಗಡಿ-ಪುಲ್ಕೆರಿ ಮಾರ್ಗವಾಗಿ ಸಂಚರಿಸಬೇಕು. ಕಾರ್ಕಳದಿಂದ ಜೋಡುರಸ್ತೆ ಕಡೆಗೆ ಹಾಗೂ ಜೋಡುರಸ್ತೆಯಿಂದ ಕಾರ್ಕಳ ಕಡೆಗೆ ಸಂಚರಿಸುವ ಬಸ್‌ಗಳು ತಾಲೂಕು ಜಂಕ್ಷನ್‌ನಿಂದ ಕಲ್ಲೊಟ್ಟೆ ಮಾರ್ಕೆಟ್ ಮಾರ್ಗವಾಗಿ ಬಸ್ ನಿಲ್ದಾಣ ಪ್ರವೇಶಿಸಬೇಕು. ಸ್ಟೇಟ್ ಬ್ಯಾಂಕ್-ಮೂರು ಮಾರ್ಗದಲ್ಲಿ ಸಂಚರಿಸುವ ಲಘು ಮತ್ತು ದ್ವಿಚಕ್ರ ವಾಹನಗಳು ಸ್ಟೇಟ್ ಬ್ಯಾಂಕ್ ಜಂಕ್ಷನ್‌ನಿಂದ ಗಾಂಧಿ ಮೈದಾನವಾಗಿ ಅಂಚೆ ಕಚೇರಿ, ಕಾಮಧೇನು ಹೋಟೆಲ್ ಜಂಕ್ಷನ್ ಮಾರ್ಗವಾಗಿ ಸಂಚರಿಸಬೇಕು.
ಈ ಅಧಿಸೂಚನೆಯನ್ನು ಮೋಟಾರು ವಾಹನ ಕಾಯ್ದೆ 1988 ರ ಕಲಂ 115 ಹಾಗೂ ಕರ್ನಾಟಕ ಮೋಟಾರು ವಾಹನ ನಿಯಮ 1989 ರ ನಿಯಮ 221 5(ಎ) ರಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ. ಹೊರಡಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.












