ಪಿಎಫ್ ಹಣ ಡ್ರಾ ಮಾಡಲು ಅನೇಕ ಸವಾಲುಗಳನ್ನು ಎದುರಿಸಬೇಕಾಗಿತ್ತು. ಇನ್ಮುಂದೆ ಆ ರೀತಿಯ ಯಾವುದೇ ಪ್ರಮೇಯ ಬರಲ್ಲ. ಎಟಿಎಂ ಮೂಲಕ ಸುಲಭವಾಗಿ ಹಣವನ್ನು ಡ್ರಾ ಮಾಡಿಕೊಳ್ಳಬಹುದಾಗಿದೆ.
ಜೂನ್ನಿಂದ ಪಿಎಫ್ ಹಣವನ್ನು ಎಟಿಎಂ ಅಥವಾ ಯುಪಿಐ ಮೂಲಕ ಹಿಂಪಡೆಯುವ ಯೋಜನೆ ಜಾರಿಗೆ ಬರಲಿದೆ. ಪಿಎಫ್ ಹಣ ಪಡೆಯಲು ಉದ್ಯೋಗಿಗಳು, ನಿವೃತ್ತ ಉದ್ಯೋಗಿಗಳು ಆಫೀಸಿಗೆ ಎಡತಾಕಬೇಕಿತ್ತು. ಇಲ್ಲದಿದ್ರೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿಬೇಕಾಗಿತ್ತು. ಇದನ್ನು ತಪ್ಪಿಸಲು ಎಟಿಎಂ ಮತ್ತು ಯುಪಿಐ ಮೂಲಕ ಪಿಎಫ್ ಹಣವಿತ್ ಡ್ರಾ ಮಾಡುವುದಕ್ಕೆ ಅವಕಾಶ ಕಲ್ಪಿಸಬೇಕು ಎಂದು ಭಾರತೀಯ ರಾಷ್ಟ್ರೀಯ ಪಾವತಿ ನಿಗಮ ಪ್ರಸ್ತಾವನೆ ಸಲ್ಲಿಸಿತ್ತು. ಇದೀಗ ಕಾರ್ಮಿಕ ಸಚಿವಾಲಯ ಅದಕ್ಕೆ ಅನುಮೋದನೆ ನೀಡಿದೆ.
ಪಿಎಫ್ ಖಾತೆಯ ಬಾಕಿಯನ್ನು ಯುಪಿಐನಲ್ಲಿ ನೋಡಬಹುದು:
ಈ ವರ್ಷದ ಜೂನ್ ವೇಳೆಗೆ ಪಿಎಫ್ ಗ್ರಾಹಕರು ಯುಪಿಐ ಮತ್ತು ಎಟಿಎಂ ಮೂಲಕ ಹಣವನ್ನು ಹಿಂಪಡೆಯಬಹುದಾಗಿದೆ. ಗ್ರಾಹಕರು ಪಿಎಫ್ ಖಾತೆಯ ಬಾಕಿಯನ್ನು ನೇರವಾಗಿ ಯುಪಿಐನಲ್ಲಿ ನೋಡಬಹುದು. ಸ್ವಯಂ ಚಾಲಿತ ವ್ಯವಸ್ಥೆ ಮೂಲಕ ತಕ್ಷಣವೇ ಒಂದು ಲಕ್ಷ ರೂಪಾಯಿವರೆಗೆ ತಮ್ಮ ಆದ್ಯತೆಯ ಬ್ಯಾಂಕ್ ಖಾತೆ ಮೂಲಕ ಹಿಂಪಡೆಯಲು ಮತ್ತು ವರ್ಗಾವಣೆಗೆ ಅವಕಾಶ ಮಾಡಿಕೊಡಲಾಗುತ್ತಿದೆ ಎಂದು ಕೇಂದ್ರ ಕಾರ್ಮಿಕ ಸಚಿವಾಲಯದ ಕಾರ್ಯದರ್ಶಿ ಸುಮಿತ್ರಾ ದಾವ್ರಾ ಮಾಹಿತಿ ನೀಡಿದ್ದಾರೆ.












