ಕಾಸರಗೋಡು: ಖಾಸಗಿ ಬಸ್ಸಿನಡಿಗೆ ಸಿಲುಕಿ ಮಹಿಳೆ ಮೃತ್ಯು: ಬಾಲಕ ಅಪಾಯದಿಂದ ಪಾರು.

ಕಾಸರಗೋಡು: ಮಹಿಳೆಯೊಬ್ಬರು ಬಸ್ಸಿನಡಿಗೆ ಸಿಲುಕಿ ಮೃತಪಟ್ಟಿರುವ ದಾರುಣ ಘಟನೆ ಕಾಸರಗೋಡಿನ ಚೆರ್ವತ್ತೂರಿನಲ್ಲಿ ಇಂದು ಮಧ್ಯಾಹ್ನ ಸಂಭವಿಸಿದೆ.

ಮೃತಪಟ್ಟವರನ್ನು ಪಡನ್ನಕಾಡಿನ ಫೌಝಿಯಾ(53) ಎಂದು ಗುರುತಿಸಲಾಗಿದೆ.

ಬಸ್‌ ಸ್ಟ್ಯಾಂಡ್‌ನಲ್ಲಿ ಪಯ್ಯನ್ನೂರಿಗೆ ತೆರಳುವ ಖಾಸಗಿ ಬಸ್ಸನ್ನು ರಿವರ್ಸ್‌ ತೆಗೆಯುವಾಗ, ಅಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆ ಫೌಝುಯಾ ಬಸ್ಸಿನಡಿಗೆ ಸಿಲುಕಿದ್ದು, ಜೊತೆಗಿದ್ದ ಎಂಟು ವರ್ಷದ ಬಾಲಕ ಅಪಾಯದಿಂದ ಪಾರಾಗಿದ್ದಾನೆ.

ಮಹಿಳೆಯು ಚಿಮೇನಿಯಲ್ಲಿರುವ ಪುತ್ರಿಯ ಮನೆಗೆ ತೆರಳಲು ಬಸ್ಸು ನಿಲ್ದಾಣಕ್ಕೆ ಬಂದ ಸಂದರ್ಭದಲ್ಲಿ ಈ ಅಪಘಾತ ನಡೆದಿದೆ. ಗಂಭೀರವಾಗಿ ಗಾಯಗೊಂಡ ಮಹಿಳೆಯನ್ನು ಚೆರ್ವತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ ಜೀವ ಉಳಿಸಲು ಸಾಧ್ಯವಾಗಿಲ್ಲ. ಚಂದೇರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ಕೊಂಡಿದ್ದಾರೆ.