ಕಿಚ್ಚ ಸುದೀಪ್ ಅಭಿನಯಿಸುತ್ತಿರುವ ಬಿಗ್ ಬಜೆಟ್‌ನ ಬಹುನಿರೀಕ್ಷಿತ ‘ಬಿಲ್ಲಾ ರಂಗ ಬಾಷಾ’ ಸಿನಿಮಾ ಚಿತ್ರೀಕರಣ ಇಂದಿನಿಂದ (ಏ.16) ಪ್ರಾರಂಭವಾಗಿದೆ. ಚಿತ್ರದ ಫಸ್ಟ್ ಲುಕ್ ಪೋಸ್ಟರ್ ರಿಲೀಸ್ ಆಗಿದೆ.
ಸಿನಿಮಾ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಸುದೀಪ್ ಪೋಸ್ಟ್ ಹಂಚಿಕೊಂಡಿದ್ದಾರೆ. ‘2209 AD BRB first blood’ ಎಂದು ಸಿನಿಮಾಗೆ ಟೈಟಲ್ ಇಡಲಾಗಿದೆ. ಪೋಸ್ಟರ್‌ನಲ್ಲಿ ಸುದೀಪ್ ಜಬರ್ದಸ್ತ್ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ.
ಎರಡು ಚಾಪ್ಟರ್‌ಗಳಲ್ಲಿ ಸಿನಿಮಾ ತೆರೆಗೆ ಬರಲಿದೆ. ಮೊದಲ ಚಾಪ್ಟರ್‌ಗೆ ‘ಫಸ್ಟ್ ಬ್ಲಡ್’ ಎಂದು ಚಿತ್ರತಂಡ ಕರೆದಿದೆ. ಅನೂಪ್ ಭಂಡಾರಿ ನಿರ್ದೇಶನದ ಪ್ಯಾನ್ ಇಂಡಿಯಾ ಚಿತ್ರ ಇದಾಗಿದೆ.












