ಬೈಂದೂರು: ಶುಭದಾ ಆಂಗ್ಲ ಮಾಧ್ಯಮ ಶಾಲೆ ಕಿರಿಮಂಜೇಶ್ವರದಲ್ಲಿ ಸಂಭ್ರಮದಿಂದ ಶಾಲಾ ವಾರ್ಷಿಕೋತ್ಸವ ಹಾಗೂ ಬಹುಮಾನ ವಿತರಣಾ ಸಮಾರಂಭ ಜನತಾ ಶನಯ 2024 ಅದ್ದೂರಿಯಾಗಿ ಎರಡು ದಿನಗಳ ಕಾಲ ಜರುಗಿತು.
ಬೈಂದೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಶ್ರೀ ಕೆ ಗೋಪಾಲ ಪೂಜಾರಿಯವರು ಕಾರ್ಯಕ್ರಮವನ್ನು ಉದ್ಘಾಟಿಸಿ ಸಂಸ್ಥೆಯ ಸರ್ವಾಂಗೀಣ ಸಾಧನೆಯ ಕುರಿತಾಗಿ ಮೆಚ್ಚುಗೆ ವ್ಯಕ್ತಪಡಿಸಿದರು.
ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ ಜನತಾ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾಗಿರುವ ಶ್ರೀ ಗಣೇಶ ಮೊಗವೀರರು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಶ್ರೇಷ್ಠವಾದ ಗುಣಮಟ್ಟದ ಶಿಕ್ಷಣವನ್ನು ನೀಡಿ ಗ್ರಾಮೀಣ ಪ್ರತಿಭೆಗಳು ರಾಜ್ಯ ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ತಮ್ಮ ಸಾಧನೆಯಿಂದ ಮಿನುಗುವಂತೆ ಮಾಡೋದು ಸಂಸ್ಥೆಯ ಗುರಿಯಾಗಿದೆ. ವಿದ್ಯಾರ್ಥಿಗಳಿಗೆ ಬೇಕಾದ ಎಲ್ಲಾ ಬಗೆಯ ಸೌಲಭ್ಯಗಳನ್ನು ಒದಗಿಸಿ ಅವರನ್ನು ರಾಷ್ಟ್ರದ ಶ್ರೇಷ್ಠ ಸಂಪತ್ತನ್ನಾಗಿಸುವುದು ನನ್ನ ಕನಸಾಗಿದೆ ಎಂದು ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ಹೇಳಿದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀ ನಾಗೇಶ್ ನಾಯಕ್ ಇವರು ಪಠ್ಯ ಹಾಗೂ ಪಠ್ಯೇತರ ವಿಷಯಗಳಲ್ಲಿ ಶುಭದಾ ಶಾಲೆಯ ವಿದ್ಯಾರ್ಥಿಗಳ ಸಾಧನೆ ಅನನ್ಯವಾದುದೆಂದು ಪ್ರಶಂಸೆ ವ್ಯಕ್ತಪಡಿಸಿದರು. ಶಾಲೆಯ ಮುಖ್ಯ ಶಿಕ್ಷಕಿಯಾದ ಕುಮಾರಿ ದೀಪಿಕಾ ಆಚಾರ್ಯ ಅವರು ಅತಿಥಿಗಳನ್ನು ಸ್ವಾಗತಿಸಿ ಶಾಲಾ ವಾರ್ಷಿಕ ವರದಿ ಯನ್ನು ವಾಚಿಸಿದರು. ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನವನ್ನು ನೀಡಿ ಗೌರವಿಸಲಾಯಿತು.
ಸಮಾರಂಭದಲ್ಲಿ ಕಿರಿಮಂಜೇಶ್ವರ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀ ಶೇಖರ್ ಖಾರ್ವಿ, ಗ್ರಾಮ ಪಂಚಾಯತ್ ಸದಸ್ಯರುಗಳಾದ ಶ್ರೀ ಮುತ್ತು ಪುತ್ರನ್, ಶ್ರೀಮತಿ ಜಯಲಕ್ಷ್ಮಿ, ಶ್ರೀಮತಿ ಸರಸ್ವತಿ, ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ಶ್ರೀಮತಿ ಶ್ಯಾಮಲಾ ಕುಂದರ್, ಶುಭದಾ ಎಜುಕೇಶನಲ್ ಟ್ರಸ್ಟ್ ಕಿರಿಮಂಜೇಶ್ವರ ಇದರ ಮಾಜಿ ಅಧ್ಯಕ್ಷರಾದ ಏನ್. ಕೆ. ಬಿಲ್ಲವ, ಶ್ರೀಮತಿ ಶುಭದಾ ಬಿಲ್ಲವ, ಕಿರಿಮಂಜೇಶ್ವರ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀ ರಾಜೇಶ್, ವಾಗ್ಮಿ ಹಾಗೂ ಚಿಂತಕ ಶ್ರೀ ದಾಮೋದರ ಶರ್ಮ, ನಾಟಕ ಹಾಗೂ ಹಾಸ್ಯ ಕಲಾವಿದರುಗಳಾದ ಶ್ರೀ ಚೇತನ್ ನೈಲಾಡಿ, ಶ್ರೀ ಪ್ರಸಾದ್ ಜೋಗಿ, ಶ್ರೀ ನಾಗರಾಜ ತೆಕ್ಕಟ್ಟೆ ಮುಂತಾದವರು ಭಾಗವಹಿಸಿದ್ದರು.
ಸಾಧಕ ವಿದ್ಯಾರ್ಥಿಗಳಿಗೆ ಗೌರವಿಸಿ ಅಭಿನಂದಿಸಲಾಯಿತು. ವಾರ್ಷಿಕ ಸಂಭ್ರಮದ ಪ್ರಯುಕ್ತ ಆಯೋಜಿಸಿದ ಕ್ರೀಡೆ, ಸಾಂಸ್ಕೃತಿಕ/ಸಾಹಿತ್ಯಕ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಿ ಪ್ರೋತ್ಸಾಹಿಸಲಾಯಿತು.
ಸಹ- ಶಿಕ್ಷಕಿ ಶ್ರೀಮತಿ ದಿವ್ಯಸುವರ್ಣ ಸ್ವಾಗತಿಸಿ, ಶಿಕ್ಷಕಿ ಶ್ರೀಮತಿ ಅನಿತಾ ರವರು ಕಾರ್ಯಕ್ರಮವನ್ನು ನಿರೂಪಿಸಿ ಶಿಕ್ಷಕ ರಾಘವೇಂದ್ರ ಡಿ ಹಾಗೂ ಶ್ರೀಮತಿ ಶಾಂಭವಿ ವಂದನಾರ್ಪಣೆಗೈದರು. ನಂತರ ವಿದ್ಯಾರ್ಥಿಗಳಿಂದ ಮನ ಸೂರೆಗೊಳ್ಳುವ ವಿವಿಧ ಮನರಂಜನಾ ಕಾರ್ಯಕ್ರಮಗಳು ವೇದಿಕೆಯ ಮೇಲೆ ಪ್ರಸ್ತುತಗೊಂಡವು.