ಕುಂಜಾರುಗಿರಿ ಶ್ರೀ ಪರಶುರಾಮ ದೇವಸ್ಥಾನದಲ್ಲಿ ರಥೋತ್ಸವ ಹಾಗೂ ಜಯಂತ್ಯುತ್ಸವ.

ಉಡುಪಿ: ಕುಂಜಾರುಗಿರಿ ಶ್ರೀ ಪರಶುರಾಮ ದೇವಸ್ಥಾನದಲ್ಲಿ ಅಕ್ಷಯ ತೃತೀಯ ಹಾಗೂ ಪರಶುರಾಮ ಜಯಂತಿಯಂದು ರಥೋತ್ಸವ ಹಾಗೂ ಜಯಂತ್ಯುತ್ಸವವು ವಿವಿಧ ವೈದಿಕ, ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಜೃಂಬಣೆಯಿಂದ ಜರುಗಿತು. ಅದಮಾರು ಮಠಾಧೀಶರಾದ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರು ಸಾನ್ನಿಧ್ಯ ವಹಿಸಿ, ಪಾಡಿಗಾರು ಶ್ರೀ ಶ್ರೀನಿವಾಸ ತಂತ್ರಿಗಳ ನೇತೃತ್ವದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ನೆರವೇರಿತು. ಭಜನಾ ಮಂಡಳಿಗಳ ಭಜನಾ ಕಾರ್ಯಕ್ರಮದೊಂದಿಗೆ ಅನ್ನಸಂತರ್ಪಣೆಯು ನಡೆಯಿತು.