ಕುಂದಾಪುರ:ರಾಜ್ಯ ಮಟ್ಟದ ಎತ್ತರ ಜಿಗಿತದಲ್ಲಿ ಚಿನ್ನದ ಪದಕ ಪಡೆದ ಶ್ರೀ ವೆಂಕಟರಮಣ ಕಾಲೇಜಿನ ವಿದ್ಯಾರ್ಥಿ ಸಿನಾನ್.

ಕುಂದಾಪುರ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕರ್ನಾಟಕ ಒಲಿಂಪಿಕ್ ಸಂಸ್ಥೆ ಜಿಲ್ಲಾಡಳಿತ, ದಕ್ಷಿಣ ಕನ್ನಡ ಮತ್ತು ಉಡುಪಿ ಇವರ ಸಹಯೋಗದಲ್ಲಿ ಜನವರಿ 17 ರಿಂದ 23 ರ ವರೆಗೆ ಉಡುಪಿಯ ಅಜ್ಜರಕಾಡು ಮೈದಾನದಲ್ಲಿ ನಡೆದ ರಾಜ್ಯ ಮಟ್ಟದ ಕರ್ನಾಟಕ ಕ್ರೀಡಾಕೂಟ 2025 ರ ಎತ್ತರ ಜಿಗಿತದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಿನಾನ್ ಚಿನ್ನದ ಪದಕ ಪಡೆಯುವುದರ ಮೂಲಕ ಅತ್ಯುತ್ತಮ ಸಾಧನೆಗೆ ಸಾಕ್ಷಿಯಾಗಿದ್ದಾನೆ.ವಿದ್ಯಾರ್ಥಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ – ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.