ಕುಂದಾಪುರ: ಬಾವಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ.

ಕುಂದಾಪುರ: ತಲ್ಲೂರು ಗ್ರಾಮದ ಸುರೇಶ (65) ಅವರು ಸಾರ್ವಜನಿಕ ಬಾವಿಗೆ ಹಾರಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

ಅವರು ಕಾಯಿಲೆಯಿಂದ ಬಳಲುತ್ತಿದ್ದು, ಜೀವನದಲ್ಲಿ ಜುಗುಪ್ಸೆಗೊಂಡು ಈ ಕೃತ್ಯ ಎಸಗಿದ್ದಾಗಿ ಅವರ ಪತ್ನಿ ದೇವಕಿ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ.