ಉಡುಪಿ: ಲೈಟಿಂಗ್ ಕೆಲಸ ಮಾಡಿಕೊಂಡಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣಾ ಸರಹದ್ದಿನ ನಿವಾಸಿ
ಧನರಾಜ (20) ಎಂಬ ಯುವಕನು ಮಾರ್ಚ್ 27 ರಂದು ಮನೆಯಿಂದ ಕೆಲಸಕ್ಕೆಂದು ಹೋದವರು ಸಂಬOಧಿಕರ ಮನೆಗೂ ಹೋಗದೇ ಈವರೆಗೂ ಮನೆಗೆ ಬಾರದೇ ನಾಪತ್ತೆಯಾಗಿರುತ್ತಾರೆ.
6 ಅಡಿ ಎತ್ತರ, ಸಾಧಾರಣ ಶರೀರ, ಎಣ್ಣೆಕಪ್ಪು ಮೈಬಣ್ಣ, ಕೋಲು ಮುಖ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಇವರ
ಬಗ್ಗೆ ಮಾಹಿತಿ ದೊರೆತಲ್ಲಿ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ಉಪನಿರೀಕ್ಷಕರು ಮೊ.ನಂ: 9480805468, ಕುಂದಾಪುರ ವೃತ್ತ ಪೊಲೀಸ್ ನಿರೀಕ್ಷಕರು ಮೊ.ನಂ: 9480805433 ಅಥವಾ ಉಡುಪಿ ಕಂಟ್ರೋಲ್ ರೂಂ ದೂ.ಸಂಖ್ಯೆ: 0820-2526444 ಅನ್ನು
ಸಂಪರ್ಕಿಸಬಹುದಾಗಿದೆ ಎಂದು ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ಉಪನಿರೀಕ್ಷಕರ ಕಚೇರಿ ಪ್ರಕಟಣೆ ತಿಳಿಸಿದೆ.












