ಕುಂದಾಪುರ: ವಿಪರೀತ ಮಾತ್ರೆ ಸೇವನೆ – ಯುವಕ ಸಾವು.

ಕುಂದಾಪುರ: ಕುಂದಾಪುರ ತಾಲೂಕಿನ ಹಂಗಳೂರಿನಲ್ಲಿ ಮೂರ್ಛ ರೋಗಕ್ಕೆ ವಿಪರೀತ ಮಾತ್ರೆ ಸೇವಿಸಿ, ಅಸ್ವಸ್ಥಗೊಂಡಿದ್ದ ಸಚಿನ್(27) ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ ಘಟನೆ ನಡೆದಿದೆ.

ಮೂರ್ಛ ರೋಗದಿಂದ ಬಳಲುತ್ತಿದ್ದ ಅವರು ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ. ಡಿಸೆಂಬರ್ 29ರಂದು ವಿಪರೀತ ಮಾತ್ರೆ ತೆಗೆದುಕೊಂಡಿದ್ದ ಅವರನ್ನು ಮಂಗಳೂರಿನ ವೆಸ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ಅವರ ಮಾವ ರಾಜು ನೀಡಿದ ದೂರಿನಂತೆ ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.