ಉಡುಪಿ: ಕೆ.ಓ.ಎಸ್ ಪರೀಕ್ಷೆಯು ಜುಲೈ ೨೯ ರಿಂದ
ಆಗಸ್ಟ್ ೭ ರ ವರೆಗೆ ನಗರದ ಡಯಟ್ ಸಂಸ್ಥೆಯಲ್ಲಿ
ನಡೆಯಲಿದ್ದು, ಪರೀಕ್ಷೆಗಳು ಸುಸೂತ್ರವಾಗಿ ಮತ್ತು
ದೋಷರಹಿತವಾಗಿ ನಡೆಸಲು ಹಾಗೂ ನಡೆಯಬಹುದಾದದ ಎಲ್ಲಾ ರೀತಿಯ ಅವ್ಯವಹಾರಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ನಿಗಧಿಪಡಿಸಿದ ಪರೀಕ್ಷಾ ಕೇಂದ್ರದ ಸುತ್ತಲೂ ೨೦೦ ಮೀ. ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, ೧೯೭೩ ರ ಕ್ರಿಮಿನಲ್ ಪ್ರೊಸೀಜರ್ ಕೋಡ್‌ನ ಸೆಕ್ಷನ್ ೧೪೪(೧) ರಂತೆ ನಿಷೇಧಾಜ್ಞೆ
ಜಾರಿಗೊಳಿಸಿ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ. ಕೆ ವಿದ್ಯಾಕುಮಾರಿ
ಆದೇಶಿಸಿರುತ್ತಾರೆ.