ಕೊರ್ಗಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಮತದಾನ

ಉಡುಪಿ: ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಅವರು ಮತದಾನ ಮಾಡಿದರು.
ಕೊರ್ಗಿಯ ಗಿರಿಜಾ ಚಂದ್ರಶೇಖರ ಹೆಗ್ಡೆ ಸರಕಾರಿ ಪ್ರಾಥಮಿಕ ಶಾಲೆಯ ಮತಗಟ್ಟೆಗೆ ಕುಟುಂಬ ಸಮೇತರಾಗಿ ಬಂದು ತಮ್ಮ ಹಕ್ಕು ಚಲಾಯಿಸಿದರು.
ಮತದಾನ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಹೆಗ್ಡೆ ಅವರು, ಒಳ್ಳೆಯ ವಾತಾವರಣ ಇದೆ. ತುಂಬಾ ಚೆನ್ನಾಗಿ ಪ್ರಚಾರ ಕಾರ್ಯ ನಡೆಸಿದ್ದೇನೆ. ಕಾರ್ಯಕರ್ತರ ಮನೆ ಮನೆಗೆ ಹೋಗಿದ್ದೇನೆ. ಖುದ್ದಾಗಿ ಮತದಾರರನ್ನು ಭೇಟಿಯಾಗಿದ್ದೇನೆ. ನಾನು ಮಾಡಿದ ಕೆಲಸ ಮತ್ತು ಸರ್ಕಾರದ ಗ್ಯಾರಂಟಿ ಯೋಜನೆಗಳು ಗೆಲುವಿಗೆ ನೆರವಾಗಲಿವೆ. ಎಷ್ಟು ಲೀಡ್ ಬರುತ್ತೆ ಅನ್ನೋದನ್ನ ಕೌಂಟಿಂಗ್ ಆದಮೇಲೆ ಹೇಳಬಹುದು ಎಂದರು.