ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳು ನಟ ವಿಶಾಲ್ ಭೇಟಿ, ವಿಶೇಷ ಪೂಜೆ ಸಲ್ಲಿಕೆ

ಉಡುಪಿ: ತೀವ್ರ ಆರೋಗ್ಯ ಸಮಸ್ಯೆಯಿಂದ ಬಳಲಿದ್ದ ತಮಿಳು ನಟ ವಿಶಾಲ್ ಅವರು ಕರ್ನಾಟಕ ಕರಾವಳಿಯ ದೈವ ದೇವರ ಮೊರೆ ಹೋಗಿದ್ದಾರೆ.

ದಕ್ಷಿಣಕನ್ನಡ ಜಿಲ್ಲೆಯ ಮೂಲ್ಕಿ ತಾಲೂಕಿನ ಹರಿಪಾದೆಯ ಧರ್ಮದೈವ ಜಾರಂದಾಯ ದೈವಸ್ಥಾನಕ್ಕೆ ವಿಶಾಲ್ ಭೇಟಿ ನೀಡಿದ್ದಾರೆ. ದೈವಕ್ಕೆ ಮಲ್ಲಿಗೆ ಹೂವು ಅರ್ಪಿಸಿ ತನ್ನ ಆರೋಗ್ಯ ಸಮಸ್ಯೆ ಬಗ್ಗೆ ಜಾರಂದಾಯ ದೈವದ ಬಳಿ ವಿಶಾಲ್ ಪ್ರಾರ್ಥನೆ ಸಲ್ಲಿಸಿದ್ದಾರೆ. ಆ ಬಳಿಕ ಬೈಂದೂರು ತಾಲೂಕಿನ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು‌. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಸಮಿತಿ ವಿಶಾಲ್ ಅವರನ್ನು‌ ಶಾಲು ಹೊದಿಸಿ ಗೌರವಿಸಿದೆ.