ಕುಂದಾಪುರ: ಬಡಜನರು ತಮ್ಮ ಬದುಕನ್ನು ಕಟ್ಟಿಕೊಳ್ಳಲು ಪೂರಕವಾಗಿ ನಮ್ಮ ಪೂರ್ವಿಕರು ಸಹಕಾರಿ ಸಂಸ್ಥೆಯನ್ನು ಆರಂಭಿಸಿದ್ದು, ಈಗ ಅದು ಬೆಳೆದು ನಿಂತು ಜನರ ಜೀವನದ ಒಂದು ಅಂಗವಾಗಿದೆ. ಅಲ್ಲದೆ ಆರ್ಥಿಕವಾಗಿ ಸುದೃಢವಾಗಿ ನಿಂತಿದೆ ಎಂದು ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಹೇಳಿದರು.
ಸಂಘದ ಕಟ್ಟಡಕ್ಕೆ ಬ್ಯಾಂಕ್ ವತಿಯಿಂದ 10 ಲಕ್ಷ ರೂ. ಅನುದಾನ:
ಕೇಂದ್ರ ಕಚೇರಿ ಉದ್ಘಾಟಿಸಿದ ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ. ಎನ್.ಎಂ. ರಾಜೇಂದ್ರ ಕುಮಾರ್ ಮಾತನಾಡಿ, ಸಂಸ್ಕೃತಿ, ಸಂಸ್ಕಾರ ತಿಳಿದ ಊರಿನ ಜನರಿಂದಲೇ ನಡೆಸಲ್ಪಡುವ ಸಹಕಾರಿ ಸಂಸ್ಥೆಯಿಂದ ಯಾರಿಗೂ ಮೋಸವಾಗದು. ಸಂಘದ ಕಟ್ಟಡಕ್ಕೆ ಬ್ಯಾಂಕ್ ವತಿಯಿಂದ 10 ಲಕ್ಷ ರೂ. ಅನುದಾನ ನೀಡುವುದಾಗಿ ಘೋಷಿಸಿದರು.

ಕೋಟ ಮೂರ್ತೆದಾರರ ಸೇವಾ ಸಹಕಾರಿ ಸಂಘದ 34ನೇ ವರ್ಷದ ಸಂಭ್ರಮ, ಸಂಘದ ಕೇಂದ್ರ ಕಚೇರಿಯ, ಸ್ವಂತ ಕಟ್ಟಡ ಹಾಗೂ ಮಾಜಿ ಮುಖ್ಯಮಂತ್ರಿ ದಿ| ಎಸ್. ಬಂಗಾರಪ್ಪ ಸ್ಮರಣಾರ್ಥ ನಿರ್ಮಿಸಲಾದ ಸಭಾಭವನವನ್ನು ರವಿವಾರ ಉದ್ಘಾಟಿಸಿದ ಅವರು, ಕೋಟ ಶಾಂಭವಿ ವಿದ್ಯಾದಾಯಿನಿ ಹಿ.ಪ್ರಾ. ಶಾಲೆ ಮೈದಾನದಲ್ಲಿ ಜರಗಿದ ಸಭೆಯಲ್ಲಿ ಮಾತನಾಡಿದರು.
ಆಡಳಿತ ಮಂಡಳಿ ಸಭಾಂಗಣವನ್ನು ಸಂಸದ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟಿಸಿ ಶುಭ ಹಾರೈಸಿದರು.

ಗ್ರಾಹಕರ ಭದ್ರತಾ ಕೋಶವನ್ನು ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ವಾಣಿಜ್ಯ ಸಂಕೀರ್ಣವನ್ನು ಮಾಜಿ ಸಚಿವ ಕೆ. ಜಯಪ್ರಕಾಶ್ ಹೆಗ್ಡೆ ಭದ್ರತಾ ಕೊಠಡಿಯನ್ನು ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಲಿ ಉದ್ಘಾಟಿಸಿದರು. ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಬಿ. ಜಯಕರ ಶೆಟ್ಟಿ ಇಂದ್ರಾಳಿಯವರು ಸಂಭ್ರಮ ನಗದು ಪತ್ರ ಬಿಡುಗಡೆಗೊಳಿಸಿದರು. ಸಹಕಾರ ಸಂಘಗಳ ನಿವೃತ್ತ ಸಹಾಯಕ ನಿಬಂಧಕ ಅರುಣ್ ಕುಮಾರ್ ಎಸ್.ವಿ. ಹಾಗೂ ಸಂಘದ ಮಾಜಿ ಅಧ್ಯಕ್ಷರು, ಉಪಾಧ್ಯಕ್ಷರು, ನಿರ್ದೇಶಕರು, ಸಂಘದ ಅಧ್ಯಕ್ಷರು, ಸಿಇಒ ಅವರನ್ನು ಸಮ್ಮಾನಿಸಲಾಯಿತು.

ಸಂಘದ ಅಧ್ಯಕ್ಷ ಕೊರಗ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ, ಆಡಳಿತ ಮಂಡಳಿ ಉಪಾಧ್ಯಕ್ಷ, ಜಯರಾಮ ಪೂಜಾರಿ, ಸದಸ್ಯರಾದ ರಾಜು ಪೂಜಾರಿ, ಕೃಷ್ಣ ಪೂಜಾರಿ, ರಾಮ ಸಂಜೀವ ಪೂಜಾರಿ, ಪೂಜಾರಿ, ಮಂಜುನಾಥ ಪೂಜಾರಿ, ಭಾರತಿ, ಪ್ರಭಾವತಿ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಉಪಸ್ಥಿತರಿದ್ದರು. ಸಿಇಒ ಜಗದೀಶ್ ಕೆಮ್ಮಣ್ಣು ಸ್ವಾಗತಿಸಿ, ನಿರ್ದೇಶಕ ಕೃಷ್ಣ ಪೂಜಾರಿ ಪಿ. ವಂದಿಸಿದರು. ಶಿಕ್ಷಕರಾದ ನರೇಂದ್ರ ಕುಮಾರ್ ಕೋಟ, ಸತೀಶ್ ವಡ್ಡರ್ಸೆ ನಿರೂಪಿಸಿದರು.