ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘ ನಿಯಮಿತ: ಅಧ್ಯಕ್ಷರಾಗಿ ಎಸ್.‌ ಪ್ರಕಾಶ್ಚಂದ್ರ ಶೆಟ್ಟಿ ಪುನರಾಯ್ಕೆ.

ಬೈಂದೂರು: ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ನೂತನ ಅಧ್ಯಕ್ಷರಾಗಿ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಮಂಜು ದೇವಾಡಿಗ ಆಯ್ಕೆಯಾಗಿದ್ದಾರೆ.

Oplus_131072

ಈ ಸಂದರ್ಭದಲ್ಲಿ ನಿರ್ದೇಶಕರಾದ ಗುರುರಾಜ ಹೆಬ್ಬಾರ್, ಪ್ರಕಾಶ್ ಎಸ್. ಪೂಜಾರಿ, ರಾಜೇಶ ದೇವಾಡಿಗ, ದಿನೀತಾ ಶೆಟ್ಟಿ, ಕೆ.ಲಲಿತಾ ಪೂಜಾರಿ, ಉದಯಕುಮಾರ ಶೆಟ್ಟಿ, ಈಶ್ವರ ಹಕ್ಲತೋಡು, ಹೂವ ನಾಯ್ಕ, ಭರತ್‌ ದೇವಾಡಿಗ ಉಪಸ್ಥಿತರಿದ್ದರು.

ಜ.30 ಗುರುವಾರ ನೂತನ ಅಧ್ಯಕ್ಷರು, ಉಪಾಧ್ಯಕ್ಷ ಆಯ್ಕೆ ಪ್ರಕ್ರಿಯೆ ನಡೆಯಿತು. ಚುನಾವಣಾಧಿಕಾರಿಯಾಗಿ ಸಹಕಾರ ಇಲಾಖೆಯ ರೋಹಿತ್ ಕುಮಾರ್‌ಚುನಾವಣಾ ಪ್ರಕ್ರಿಯೆ ನಡೆಸಿಕೊಟ್ಟರು. ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿಷ್ಣು ಆರ್ ಪೈ. ವಂದಿಸಿದರು.