ಗುಣಮಟ್ಟದ ವಾಣಿಜ್ಯ ಶಿಕ್ಷಣಕ್ಕೆ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜು ಅತ್ಯುತ್ತಮ ಆಯ್ಕೆ.

ಉಡುಪಿ ಜಿಲ್ಲೆಯಲ್ಲಿಯೇ ಅಮೋಘ ಫಲಿತಾಂಶ ವನ್ನು ನೀಡುತ್ತಾ ಬಂದಿರುವ ಈ ಸಂಸ್ಥೆ, ವಿಜ್ಞಾನ ವಿಭಾಗ ಮಾತ್ರವಲ್ಲದೆ ವಾಣಿಜ್ಯ ವಿಭಾಗದಲ್ಲಿಯೂ ರಾಜ್ಯಮಟ್ಟದಲ್ಲಿ ಅಗ್ರ ರಾಂಕ್ ಗಳನ್ನು ಪಡೆದುಕೊಂಡಿದೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಮೊದಲ ದಿನದಿಂದಲೇ ತರಬೇತಿ ನೀಡಲಾಗುತ್ತಿದೆ. ಏಳು ಉಪನ್ಯಾಸಕರು ಸೇರಿಕೊಂಡು ನಿರ್ಮಿಸಿದ ಈ ಸಂಸ್ಥೆ ಇಂದು ರಾಜ್ಯಮಟ್ಟದಲ್ಲಿ ಅತ್ಯುತ್ತಮ ಕಾಲೇಜ್ ಎಂದು ಗುರುತಿಸಿ ಕೊಂಡಿದೆ. ಶೈಕ್ಷಣಿಕ ಮಾತ್ರವಲ್ಲದೆ ಎಲ್ಲಾ ಕ್ಷೇತ್ರಗಳಲ್ಲೂ ಸಾಧನೆ ಮಾಡಿಕೊಂಡು ಬಂದಿದೆ.

ದ್ವಿತೀಯ ಪಿಯುಸಿಯಲ್ಲಿ ರಾಜ್ಯದ ಹತ್ತು ರಾಂಕ್ ಗಳಲ್ಲಿ ವಾಣಿಜ್ಯ ವಿಭಾಗಕ್ಕೆ 3 ರಾಂಕ್:

2022-23 ನೆ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿಯಲ್ಲಿ ಪ್ರತಿ ವರ್ಷವೂ ಶೆ.100 ರಷ್ಟು ಫಲಿತಾಂಶದ ಜೊತೆ ಅನಘ (ಮೂರನೇ ರಾಂಕ್) ದಿವಿತ್ ಗೌಡ(ಏಳನೇ ರಾಂಕ್) ಹಾಗೂ ಅಕ್ಷತಾ ಪೈ( ಹತ್ತನೇ ರಾಂಕ್) ನ್ನು ಪಡೆದಿರುತ್ತಾರೆ.

CA ಫೌಂಡೇಷನ್ ಅರ್ಹತಾ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ ಅಮೋಘ ಸಾಧನೆ: ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ ಆಫ್ ಇಂಡಿಯಾ ಸಂಸ್ಥೆಯವರು ನಡೆಸಿದ CA ಫೌಂಡೇಶನ್ ಪರೀಕ್ಷೆಯಲ್ಲಿ ಕ್ರಿಯೇಟಿವ್ ಕಾಲೇಜ್ ನ 20 ವಿದ್ಯಾರ್ಥಿ ಗಳು ತೇರ್ಗಡೆ ಹೊಂದಿರುತ್ತಾರೆ ಪ್ರಥಮ ಪಿಯುಸಿಯಿಂದಲೇ ವಿಶೇಷ ತರಬೇತಿ ನೀಡುತ್ತಿದ್ದು ಅತ್ಯುತ್ತಮ ಹಾಗೂ ಕಡಿಮೆ ಶುಲ್ಕದೊಂದಿಗೆ ನುರಿತ ಉಪನ್ಯಾಸಕರಿಂದ ತರಬೇತಿ ನೀಡಲಾಗುತ್ತದೆ.

CSEET ಕಂಪನಿ ಸೆಕ್ರೆಟರಿ ಪರೀಕ್ಷೆಯಲ್ಲಿ ಪ್ರತಿ ವರ್ಷ ದಾಖಲೆಯ ಫಲಿತಾಂಶ:

ICSI ನಡೆಸುವ ಕಂಪನಿ ಸೆಕ್ರೆಟರಿಯ ಅರ್ಹತಾ ಪರೀಕ್ಷೆಯಲ್ಲಿ ಈ ಶೈಕ್ಷಣಿಕ ವರ್ಷದ 23 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ನಿರಂತರ ನುರಿತ ಉಪನ್ಯಾಸಕ ರಿಂದ ತರಬೇತಿ ನೀಡಲಾಗುತ್ತಿದೆ. ಇದಲ್ಲದೆ, ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಟ್ಯಾಲಿ ಪ್ರೈಮ್, ಪೈತಾನ್, ಕಮ್ಯುನಿಕೇಶನ್ ಸ್ಕಿಲ್ಸ್ ಬಗ್ಗೆ ತರಬೇತಿ ನೀಡಲಾಗುತ್ತದೆ. ವಿದ್ಯಾರ್ಥಿಗಳಿಗೆ ಕ್ರೀಡೆ, ಸಾಂಸ್ಕೃತಿಕ , ಸಾಹಿತ್ಯ, ರಾಷ್ಟ್ರೀಯ ಸೇವಾ ಯೋಜನೆ, ಕೆಸರಾಟ ಪಾಠ, ಯಕ್ಷಗಾನ, ಕೈಗಾರಿಕೆ ಭೇಟಿ ಸಂಗೀತ ತರಬೇತಿ ಗಳು ಹಾಗೂ ವ್ಯಕ್ತಿತ್ವ ವಿಕಸನ ಶಿಬಿರಗಳನ್ನುನೀಡಲಾಗುತ್ತಿದೆ. ವಿಶೇಷವಾಗಿ ರಾಷ್ಟ್ರೀಯ ಹಾಗೂ ಅಂತರಾಷ್ಟಮಟ್ಟದಲ್ಲಿ ವಾಣಿಜ್ಯ ವಿದ್ಯಾರ್ಥಿಗಳಿಗೆ ಕ್ರೀಡೆಯಲ್ಲಿ ಸಜ್ಜುಗೊಳಿಸಲಾಗುತ್ತಿದೆ.