ಚೇರ್ಕಾಡಿ ದೊಡ್ಡಮನೆ ಸಿ.ವಿಜಯ ಹೆಗ್ಡೆ ಶ್ರದ್ಧಾಂಜಲಿ ಸಭೆ

ಉಡುಪಿಯ ಹಿರಿಯ ನ್ಯಾಯವಾದಿ, ರಾಜಕೀಯ-ಶೈಕ್ಷಣಿಕ-ಸಾಮಾಜಿಕ ಮುಖಂಡ ಚೇರ್ಕಾಡಿ ದೊಡ್ಡಮನೆ ಸಿ.ವಿಜಯ ಹೆಗ್ಡೆಯವರ ಶ್ರದ್ಧಾಂಜಲಿ ಸಭೆಯು ಉಡುಪಿಯ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾ ಭವನದಲ್ಲಿ ಇಂದು ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಚೇರ್ಕಾಡಿ ದೊಡ್ಡಮನೆ ಕುಟುಂಬದ ಪರವಾಗಿ ನ್ಯಾಯವಾದಿ ಪ್ರೇಮ್ ಪ್ರಸಾದ್ ಶೆಟ್ಟಿಯವರು ದಿವಂಗತ ವಿಜಯ ಹೆಗ್ಡೆಯವರ ವ್ಯಕ್ತಿತ್ವದ ಪರಿಚಯವನ್ನು ಮಾಡಿ ಕುಟುಂಬಸ್ಥರ ಪರವಾಗಿ ಶ್ರದ್ಧಾಂಜಲಿ ಸಲ್ಲಿಸಿದರು.

ಮಾಜಿ ಸಂಸದರು ಹಾಗೂ ಸಚಿವರಾದ ಶ್ರೀ ಜಯಪ್ರಕಾಶ್ ಹೆಗ್ಡೆ, ಹೈಕೋರ್ಟ್ ನ್ಯಾಯಮೂರ್ತಿಗಳಾದ ಶ್ರೀ ವಿಶ್ವಜಿತ್ ಶೆಟ್ಟಿ, ಉಡುಪಿ ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷರಾದ ಶ್ರೀ ಕಿಶನ್ ಹೆಗ್ಡೆ ಕೊಳ್ಕೆಬೈಲ್ , ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಶ್ರೀ ಕಿಶೋರ್ ಕುಮಾರ್, ಹಿರಿಯ ನ್ಯಾಯವಾದಿಗಳಾದ ಮಟ್ಟಾರ್ ರತ್ನಾಕರ ಹೆಗ್ಡೆ, ಹರಿಮಕ್ಕಿ ರತ್ನಾಕರ ಶೆಟ್ಟಿ, ಶಾರದಾ ಪ್ರೌಢ ಶಾಲಾಭಿವೃದ್ಧಿ ಮಂಡಳಿಯ ಉಪಾಧ್ಯಕ್ಷರಾದ ಶ್ರೀ ಆರೂರು ತಿಮ್ಮಪ್ಪ ಶೆಟ್ಟಿ, ಮಾಜಿ ಶಾಸಕರಾದ ವಿನಯ್ ಕುಮಾರ್ ಸೊರಕೆ, ರಘುಪತಿ ಭಟ್ ರವರು ನಮನ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ವಿಜಯ್ ಹೆಗ್ಡೆಯವರ ಆಪ್ತರು, ಬಂಧುಗಳು, ವಕೀಲ ಮಿತ್ರರು, ಸಾವಿರಾರು ಸಂಖ್ಯೆಯಲ್ಲಿ ನೆರೆದಿದ್ದರು. ಅಖಿಲ್ ಹೆಗ್ಡೆ ಕಾರ್ಯಕ್ರಮ ನಿರೂಪಿಸಿದರು.