ಉಡುಪಿ: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕ ಸಹಕಾರದೊಂದಿಗೆ ಶ್ರೀ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ವತಿಯಿಂದ ನೀಡುವ “ಸಂಗೊಳ್ಳಿ ರಾಯಣ್ಣ ಪುರಸ್ಕಾರ 2024” ಅನ್ನು ಈ ವರ್ಷ ಕನ್ನಡ ನಾಡು-ನುಡಿ – ಸಂಸ್ಕೃತಿ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಸಾಧನೆ ಮಾಡಿದ ಜಯಕರ ಶೆಟ್ಟಿ ಇಂದ್ರಾಳಿ ಅವರಿಗೆ ನೀಡಲಾಗುತ್ತಿದೆ. ಇದೇ ಬರುವ ಸೆಪ್ಟೆಂಬರ್ 16ರ ಸೋಮವಾರದಂದು ಪ್ರಶಸ್ತಿ ಪುರಸ್ಕಾರ ಪ್ರದಾನ ಮಾಡಲಾಗುವುದು ಎಂದು ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ಅಧ್ಯಕ್ಷ ಸಿದ್ದಬಸಯ್ಯ ಸ್ವಾಮಿ ಚಿಕ್ಕಮಠ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಕಸಾಪ ಉಡುಪಿ ತಾಲ್ಲೂಕು ಘಟಕದ ಅಧ್ಯಕ್ಷ ರವಿರಾಜ್ ಎಚ್ ಪಿ, ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ಉಪಾಧ್ಯಕ್ಷ ಲಕ್ಷ್ಮಣ್ ಕೋಲ್ಕಾರ್ ಮತ್ತು ಕನ್ನಡಪರ ಸಂಘಟನೆಯ ಪ್ರಭಾಕರ್ ಪೂಜಾರಿ, ಪ್ರಧಾನ ಕಾರ್ಯದರ್ಶಿ ಮಹೇಶ್ ಗುಂಡಿಬೈಲು ಉಪಸ್ಥಿತರಿದ್ದರು.












