ಜಿಲ್ಲಾ ಕಾರಾಗೃಹದಲ್ಲಿ ಕೈದಿಯೊಬ್ಬ ಹೃದಯಾಘಾತದಿಂದ ಮೃತ್ಯು.

ಹಿರಿಯಡ್ಕ: ಉಡುಪಿ ಜಿಲ್ಲೆಯ ಹಿರಿಯಡ್ಕದ ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯೊಬ್ಬ ಹೃದಯಾಘಾತದಿಂದ ನಿನ್ನೆ ಮೃತಪಟ್ಟ ಘಟನೆ ನಡೆದಿದೆ.

ಸಾವನ್ನಪ್ಪಿದ ಜೈಲು ಕೈದಿ ಅನೂಪ್ ಕುಮಾರ್ ಶೆಟ್ಟಿ ಎಂದು ತಿಳಿದು ಬಂದಿದೆ.

ಕುಂದಾಪುರದಲ್ಲಿ ಮೂರು ವರ್ಷದ ಹಿಂದೆ ನಡೆದ ಉದ್ಯಮಿ ಅಜೇಂದ್ರ ಶೆಟ್ಟಿ ಕೊಲೆ ಪ್ರಕರಣ ಆರೋಪಿಯಾಗಿದ್ದ ಎಂದು ತಿಳಿಯಲಾಗಿದೆ.

ವಿಚಾರಣಾ ಖೈದಿಯಾಗಿದ್ದ ಅನೂಪ್ ಕಾಯಿಲೆಯಿಂದ ಬಳಲುತ್ತಿದ್ದ. ಇಂದು ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ.