ಕಾರ್ಕಳ ಜ್ಞಾನಸುಧಾ ವಿದ್ಯಾರ್ಥಿನಿ ಸಹನಾ ರಾಜ್ಯಕ್ಕೆ ತೃತೀಯ

ಕಾರ್ಕಳ: ಎಸ್ಸ್ ಸೆಲ್ಸಿ ಫಲಿತಾಂಶ ಪ್ರಕಟವಾಗಿದ್ದು, ಕಳೆದ ಸಾಲಿನಲ್ಲಿ 18ನೇ ಸ್ಥಾನ ಪಡೆದಿದ್ದ ಉಡುಪಿ ಜಿಲ್ಲೆ ಈ ಬಾರಿ 94% ಫಲಿತಾಂಶದೊಂದಿಗೆ ಪ್ರಥಮ ಸ್ಥಾನಕ್ಕೇರಿದೆ. ಕಾರ್ಕಳ ಜ್ಞಾನಸುಧಾ ವಿದ್ಯಾರ್ಥಿನಿ ಸಹನಾ 623 ಅಂಕಗಳೊಂದಿಗೆ ರಾಜ್ಯಕ್ಕೆ ತೃತೀಯ ಸ್ಥಾನ ಪಡೆದಿದ್ದಾರೆ. ಈಕೆ ಕಾರ್ಕಳ ತಾಲೂಕು ಹಿರ್ಗಾನ ಗ್ರಾಮದ ಜೋಡು ರಸ್ತೆಯ ಶಂಕರ್ ಹಾಗೂ ಪ್ರಭಾಕರ್ ಅವರ ಪುತ್ರಿ.