ಡಾ‌.ಉಮೇಶ್ ಪ್ರಭು ಮಡಿಲಿಗೆ ಬಾಲ‌ ವಾತ್ಸಲ್ಯ ಸಿಂಧು ಪ್ರಶಸ್ತಿ.

ಶ್ರೀಕೃಷ್ಣ ಬಾಲನಿಕೇತನದಲ್ಲಿ ಶ್ರೀಕೃಷ್ಣ ಬಾಲನಿಕೇತನ, ವಿಶ್ವೇಶತೀರ್ಥ ಸೇವಾಧಾಮ, ಶ್ರೀ ಕೃಷ್ಣ ಸೇವಾಧಾಮ‌ ಟ್ರಸ್ಟ್ ವತಿಯಿಂದ ಬುಧವಾರ ಕೊಡಮಾಡುವ ಬಾಲ್ಯ ವಾತ್ಸಲ್ಯ ಸಿಂಧು ಪ್ರಶಸ್ತಿಯನ್ನು ಸಂತೆಕಟ್ಟೆ ಕೃಷ್ಣಾನುಗ್ರಹ ಸಂಸ್ಥೆ ಚೇರ್ಮನ್ ಡಾ.ಉಮೇಶ್ ಪ್ರಭು ಅವರಿಗೆ ಪ್ರಧಾನ ಮಾಡಿ ಆಶೀರ್ವಚನ ನೀಡಿದರು.

ಸಮಾಜದಲ್ಲಿ ಎಲ್ಲಿಯೂ ಅನಾಥಾಶ್ರಮ ಹಾಗೂ ವೃದ್ಧಾಶ್ರಮ ಇರಬಾರದು. ಶಿಕ್ಷಣದ ಜತೆಗೆ ಮೌಲ್ಯ ಮತ್ತು ಸಂಸ್ಕಾರ ಕಲಿಸಿಕೊಡಬೇಕು ಎಂದು ಡಾ.ಉಮೇಶ್ ಪ್ರಭು ಪ್ರಶಸ್ತಿ ಸ್ವೀಕರಿಸಿ ಮಾತನಾಡಿದರು.

60ರ ಸಂಭ್ರಮದಲ್ಲಿರುವ ಪೇಜಾವರ ಸ್ವಾಮೀಜಿಯವರನ್ನು ಬಾಲನಿಕೇತನ ಟ್ರಸ್ಟ್ ವತಿಯಿಂದ ಅಭಿನಂದಿಸಿ ಗೌರವಿಸಲಾಯಿತು.

ಡಾಟ್ ನೆಟ್ ಸಿಇಒ ಡಾ. ನರಸಿಂಹ ಭಟ್‌‌, ಉಪಸ್ಥಿತರಿದ್ದರು.

ಬಿ. ಕೆ‌.ನಾರಾಯಣ್ ಪ್ರಶಸ್ತಿ ಪುರಸ್ಕೃತರನ್ನು ಪರಿಚಯಿಸಿದರು.

ಶ್ರೀಕೃಷ್ಣ ಬಾಲನಿಕೇತನ ಆಡಳಿತ ಮಂಡಳಿ ಉಪಾಧ್ಯಕ್ಷ ಪ್ರೊ! ಕಮಲಾಕ್ಷ ಸ್ವಾಗತಿಸಿ, ಕಾರ್ಯದರ್ಶಿ ರಾಮಚಂದ್ರ ಉಪಾಧ್ಯ ಪ್ರಸ್ತಾವನೆಗೈದು,‌ ಗುರುರಾಜ್ ಭಟ್ ನಿರೂಪಿಸಿದರು.