ಡಿಪ್ಲೋಮಾ ಕೋರ್ಸುಗಳ ಪ್ರವೇಶಾತಿ: ಅರ್ಜಿ ಆಹ್ವಾನ

ಉಡುಪಿ: ಮೈಸೂರಿನ ಕೇಂದ್ರೀಯ ಪೆಟ್ರೋಕೆಮಿಕಲ್ಸ್ ಇಂಜಿನಿಯರಿ೦ಗ್ ಮತ್ತು ತಂತ್ರಜ್ಞಾನ ಸಂಸ್ಥೆ (ಸಿಪೆಟ್)ಯ ಕೌಶಲ್ಯ ಮತ್ತು ತಾಂತ್ರಿಕ ತರಬೇತಿ ಕೇಂದ್ರದಲ್ಲಿ 2024-25ನೇ ಸಾಲಿನ ಉದ್ಯೋಗಾರಿತ ಮತ್ತು ಉದ್ಯೋಗ ಖಚಿತ ಡಿಪ್ಲೊಮಾ ಕೋರ್ಸ್ಗಳಾದ ಡಿಪ್ಲೋಮಾ ಇನ್ ಪ್ಲಾಸ್ಟಿಕ್ಸ್ ಟೆಕ್ನಾಲಜಿ ಹಾಗೂ ಡಿಪ್ಲೋಮಾ ಇನ್ ಪ್ಲಾಸ್ಟಿಕ್ಸ್ ಮೌಲ್ಡ್ ಟೆಕ್ನಾಲಜಿ ಕೋರ್ಸ್ಗಳ ಪ್ರವೇಶಾತಿಗೆ ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ.(ವಿಜ್ಞಾನ) ಪರೀಕ್ಷೆಯಲ್ಲಿ ತೇರ್ಗಡೆಯಾದವರು ಹಾಗೂ ಹಾಜರಾದವರಿಂದ ಆನ್‌ಲೈನ್ ಹಾಗೂ ಆಫ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ www.cipet.gov.in ಅಥವಾ ದೂ.ಸಂಖ್ಯೆ: 0821-2510618, 9480253024, 9791431827 ಹಾಗೂ 9466585669 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.