ಡಿಪ್ಲೋಮಾ ಪ್ರವೇಶಾತಿ: ಅವಧಿ ವಿಸ್ತರಣೆ

ಉಡುಪಿ: ಪ್ರಸಕ್ತ ಸಾಲಿನಲ್ಲಿ ಕಾಪುವಿನ ಸರ್ಕಾರಿ ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ ಪ್ರಥಮ ವರ್ಷದ ಡಿಪ್ಲೋಮಾ ಕೋರ್ಸುಗಳ ಪ್ರವೇಶಾತಿಗೆ ಅರ್ಜಿ ಸಲ್ಲಿಸುವ ಅವಧಿಯನ್ನು ಮೇ 21 ರ ವರೆಗೆ ವಿಸ್ತರಿಸಲಾಗಿದೆ.

ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಶೇ. 35 ಅಂಕ ಪಡೆದಿರುವ ಅರ್ಹ ಅಭ್ಯರ್ಥಿಗಳು ಆಟೋಮೇಷನ್ ಅಂಡ್ ರೊಬೋಟಿಕ್ಸ್ ಮತ್ತು ಕ್ಲೌಡ್ ಕಂಪ್ಯೂಟಿoಗ್ ಅಂಡ್ ಬಿಗ್ ಡೇಟಾ ಎಂಬ ನೂತನ ಕೋರ್ಸುಗಳಲ್ಲಿ ಬಾಕಿ ಉಳಿದಿರುವ ಸೀಟುಗಳಿಗೆ ಸೂಕ್ತ ದಾಖಲೆಗಳೊಂದಿಗೆ ನೇರವಾಗಿ ಸಂಸ್ಥೆಯಲ್ಲಿ ಆಫ್‌ಲೈನ್ ಮೂಲಕ ಪ್ರವೇಶ ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಪ್ರಾಂಶುಪಾಲರು, ಸರ್ಕಾರಿ ಪಾಲಿಟೆಕ್ನಿಕ್, ಕಾಪು ಮೊ.ನಂ: 9902405533, 9480773870, 9740842743 ಹಾಗೂ 8050015592 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.