ಮಂಗಳೂರು : ಸಿ ಎಸ್ ಎಕ್ಸಿಕ್ಯೂಟಿವ್ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಮಂಗಳೂರಿನ ತ್ರಿಶಾ ಕ್ಲಾಸಸ್ ವತಿಯಿಂದ ಸನ್ಮಾನ ಕಾರ್ಯಕ್ರಮವು ತ್ರಿಶಾ ಕಾಲೇಜ್ ಆಫ್ ಕಾಮರ್ಸ್ ಅಂಡ್ ಮ್ಯಾನೇಜ್ಮೆಂಟ್ ನ ಸಭಾಂಗಣದಲ್ಲಿ ಆಗಸ್ಟ್ 31 ರಂದು ನಡೆಯಿತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿದ್ದ ತ್ರಿಶಾ ಸಮೂಹ ಸಂಸ್ಥೆಗಳ ಶೈಕ್ಷಣಿಕ ಸಲಹೆಗಾರರಾದ ಡಾ.ನಾರಾಯಣ್ ಕಾಯರ್ಕಟ್ಟೆ ಇವರು ವಿದ್ಯಾರ್ಥಿಗಳು ವಿಷಯಗಳನ್ನು ಪ್ರಾಯೋಗಿಕವಾಗಿ ಕಲಿಯಬೇಕು. ಷೇರು ಮಾರುಕಟ್ಟೆಯಲ್ಲಿ ಮತ್ತು ಕಾನೂನುಗಳಲ್ಲಿ ಆಗುವ ನಿರಂತರ ಬದಲಾವಣೆಗಳನ್ನು ತಿಳಿದುಕೊಳ್ಳಬೇಕು. ಸ್ಪರ್ಧಾತ್ಮಕ ಜಗತ್ತಿನಲ್ಲಿ ಅವಕಾಶಗಳು ಹಲವು, ಅವುಗಳಲ್ಲಿ ಯಶಸ್ವಿಯಾಗಲು ನಿರಂತರ ಪರಿಶ್ರಮ, ಕಾರ್ಯಕ್ಷಮತೆ ಮತ್ತು ಛಲ ಇರಬೇಕು ಎನ್ನುತ್ತಾ ವಿದ್ಯಾರ್ಥಿಗಳಿಗೆ ಶುಭಹಾರೈಸಿದರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಪೋಷಕರ ಸಮ್ಮುಖದಲ್ಲಿ ಸನ್ಮಾನಿಸಲಾಯಿತು. ವಿದ್ಯಾರ್ಥಿಗಳು ತಮ್ಮ ಅನುಭವಗಳನ್ನು ಹಂಚಿಕೊಂಡರು.
ಕಾರ್ಯಕ್ರಮದಲ್ಲಿ ತ್ರಿಶಾ ಕಾಲೇಜ್ ಆಫ್ ಕಾಮರ್ಸ್ ಅಂಡ್ ಮ್ಯಾನೇಜ್ಮೆಂಟ್ ನ ಪ್ರಾಂಶುಪಾಲರಾದ ಪ್ರೊ. ಮಂಜುನಾಥ್ ಕಾಮತ್, ತ್ರಿಶಾ ಕ್ಲಾಸಸ್ ನ ಬೋಧಕರಾದ ಮಾನಸ ಹೆಗ್ಡೆ, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.ಕಾರ್ಯಕ್ರಮವನ್ನು ಶಿವಾನಿ ಶೆಣೈ ನಿರೂಪಿಸಿ, ಆದಿತ್ಯಾ ಜೆ. ಶೆಟ್ಟಿ ವಂದಿಸಿದರು.