ದೊಡ್ಡಣ್ಣ ಗುಡ್ಡೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ಬ್ರಹ್ಮಕಲಾಶೋತ್ಸವದ ಪೂರ್ವಭಾವಿ ಕಾರ್ಯಕ್ರಮ ಸಂಪನ್ನ

ಉಡುಪಿ ದೊಡ್ಡಣ್ಣ ಗುಡ್ಡೆಯ ಶ್ರೀಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದ 18ನೇ ಪ್ರತಿಷ್ಠ ವರ್ಧಂತಿ ಮಹೋತ್ಸವದ ಪ್ರಯುಕ್ತ ಸಂಪನ್ನಗೊಳ್ಳಲಿರುವ ಧಾರ್ಮಿಕ ಕಾರ್ಯಕ್ರಮಗಳಿಗೆ ಕ್ಷೇತ್ರದ ಧರ್ಮದರ್ಶಿ ಶ್ರೀಯುತ ಶ್ರೀ ಶ್ರೀ ರಮಾನಂದ ಗುರೂಜಿ ಮಾರ್ಗದರ್ಶನದಲ್ಲಿ ವೇದಮೂರ್ತಿ ಕೊಲಕಾಡಿ ವಾದಿರಾಜ ಉಪಾಧ್ಯಾಯ ಶ್ರೀ ಗಣೇಶ ಸರಳಾಯ ಅವರ ಸಾಮೂಹಿಕ ದೇವತಾ ಪ್ರಾರ್ಥನೆಯೊಂದಿಗೆ ಕ್ಷೇತ್ರ ಉಸ್ತುವಾರಿ ಶ್ರೀಮತಿ ಕುಸುಮ ನಾಗರಾಜ್ ದೀಪ ಪ್ರಜ್ವಲಿಸುವುದರೊಂದಿಗೆ ಚಾಲನೆ ನೀಡಲಾಯಿತು.
ಕ್ಷೇತ್ರದಲ್ಲಿ ತೋರಣ ಮಹೂರ್ತ ಉಗ್ರಾಣಮಹೂರ್ತ ವಾಸ್ತು ರಾಕ್ಷೋಜ್ಞಾದಿ ಪ್ರಕ್ರಿಯೆಗಳು, ಸಪ್ತ ಶುದ್ದಿ ಪ್ರಾಸಾದ ಶುದ್ದಿ, ಪ್ರಸನ್ನ ಪೂಜೆ, ಮಹಾ ಅನ್ನಸಂತರ್ಪಣೆ ನೆರವೇರಿದವು.
ತಾರೀಕು 23ರಂದು ದುರ್ಗಾ ಆದಿಶಕ್ತಿ ದೇವಿಗೆ ಅಷ್ಟೋತ್ತರ ಶತ ಬ್ರಹ್ಮಕುಂಬಾಭಿಷೇಕ ಮಂಜು ರಂಗ ಪೂಜಾ ಸಹಿತ ಬಲಿ ಉತ್ಸವ ಹಾಗೂ ತಾರೀಕು 24ರ ಶುಕ್ರವಾರದಂದು ಮಹಾ ಚಂಡಿಕಾಯಾಗ ಮಹಾಸಂಪ್ರೋಕ್ಷಣೆ ಮಹಾ ಮಂತ್ರಾಕ್ಷತೆ ನೆರವೇರಲಿದೆ ಎಂದು ಕ್ಷೇತ್ರದ ಪ್ರಕಟಣೆ ತಿಳಿಸಿದೆ