ದ್ವಿತೀಯ ಪಿಯುಸಿ: ಶ್ರೀ ವೆಂಕಟರಮಣ ಕಾಲೇಜಿಗೆ ದ್ವಿತೀಯ ರ್ಯಾಂಕ್ ನೊಂದಿಗೆ ಶೇ 100 ಫಲಿತಾಂಶ, 16 ವಿದ್ಯಾರ್ಥಿಗಳಿಗೆ ರಾಜ್ಯ ಮಟ್ಟದ ಟಾಪ್ 10 ರ್ಯಾಂಕ್.

ಕುಂದಾಪುರ : ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಶ್ರೀಲಕ್ಷ್ಮಿ ಹೆಬ್ಬಾರ್ ದ್ವಿತೀಯ ಪಿಯುಸಿ 2 ನೇ ಹಂತದ ವಾರ್ಷಿಕ ಪರೀಕ್ಷೆ ಯಲ್ಲಿ 597 ಅಂಕದೊಂದಿಗೆ ರಾಜ್ಯಕ್ಕೆ ದ್ವಿತೀಯ ಸ್ಥಾನಿಯಾಗಿ, ಜಿಲ್ಲೆಗೆ ಪ್ರಥಮ ಸ್ಥಾನ ಪಡೆದು ಅನನ್ಯ ಸಾಧನೆಗೆ ಸಾಕ್ಷಿಯಾಗಿದ್ದಾಳೆ. ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಾಲೇಜು ಕುಂದಾಪುರ ಹಾಗೂ ಬೈಂದೂರು ತಾಲೂಕಿನಲ್ಲಿ ವಿಜ್ಞಾನ ವಿಭಾಗದಲ್ಲಿ ಪ್ರಥಮ ಸ್ಥಾನ ಹಾಗೂ ವಾಣಿಜ್ಯ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು, 16 ವಿದ್ಯಾರ್ಥಿಗಳು ರಾಜ್ಯದ ಟಾಪ್ 10 ಸ್ಥಾನ ಪಡೆಯುವುದರ ಮೂಲಕ ಕಾಲೇಜು ಸಾಧನೆ ಮೆರೆದಿದೆ.

ವಿಜ್ಞಾನ ವಿಭಾಗದಲ್ಲಿ ಶ್ರೇಯಸ್ ಕುಮಾರ್ 595 ಅಂಕದೊಂದಿಗೆ 4ನೇ ರ್ಯಾಂಕ್, ಅನಿರುದ್ದ್ ಶೇಟ್, ದಿಶಾ ಪೈ 593 ಅಂಕದೊಂದಿಗೆ 6 ನೇ ರ್ಯಾಂಕ್, ಮಾನ್ಯ, ಸಂಜನಾ, ಪ್ರಥ್ವಿ ನ್ , ವಿಶಾಲ್ 592 ಅಂಕದೊಂದಿಗೆ 7ನೇ ರ್ಯಾಂಕ್, ಸುಜಯಾ ಎಚ್‌ 591 ಅಂಕಗಳೊಂದಿಗೆ 8ನೇ ರ್ಯಾಂಕ್, ಪೂಜಾ ಕಾರಂತ 590 ಅಂಕಗಳೊಂದಿಗೆ 9ನೇ ರ್ಯಾಂಕ್, ನಮ್ರತಾ, ಆಕಾಶ್ ಕಿಣಿ 589 ಅಂಕಗಳೊಂದಿಗೆ 10ನೇ ರ್ಯಾಂಕ್ ಪಡೆದಿರುತ್ತಾರೆ.

ವಾಣಿಜ್ಯ ವಿಭಾಗದಲ್ಲಿ ವಿನಯ್ ಶ್ಯಾನುಭಾಗ್ 593 ಅಂಕದೊಂದಿಗೆ 5ನೇ ಸ್ಥಾನ ಪಡೆದು, ಕುಂದಾಪುರ ಹಾಗೂ ಬೈಂದೂರು ತಾಲೂಕಿಗೆ ಪ್ರಥಮ, ಆಯೇಷಾ ಮುಸ್ಕಾನ್ ಮತ್ತು ಸಿಂಚನಾ 590 ಅಂಕಗಳೊಂದಿಗೆ 8ನೇ ರ್ಯಾಂಕ್, ಶ್ರದ್ದಾ 588 ಅಂಕಗಳೊಂದಿಗೆ 10 ನೇ ರ್ಯಾಂಕ್ ಪಡೆದು ರಾಜ್ಯ ಮಟ್ಟದಲ್ಲಿ ಸಾಧನೆ ಮೆರೆದಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ – ಬೋಧಕೇತರ ಸಿಬ್ಬಂದಿಗಳು ಅಭಿನಂದನೆ ಸಲ್ಲಿಸಿದ್ದಾರೆ.