ಬಾಲಿವುಡ್ ನಟಿ ಪೂನಂ ಪಾಂಡೆ ಇನ್ನಿಲ್ಲ.

ನವದೆಹಲಿ: ಬಾಲಿವುಡ್ ನಟಿ, ಮಾಡೆಲ್ ಪೂನಂ ಪಾಂಡೆ ಹಠಾತ್ ನಿಧನರಾಗಿದ್ದಾರೆ. ಈ ಸುದ್ದಿಯನ್ನು ಅವರ ಮ್ಯಾನೇಜರ್ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಖಚಿತಪಡಿಸಿದ್ದಾರೆ.

ಪೂನಂ ಅವರು ಗರ್ಭಕಂಠ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅವರು ಗುರುವಾರ ತಡರಾತ್ರಿ ಕಾನ್ಪುರದಲ್ಲಿ ನಿಧನ ಹೊಂದಿದ್ದಾರೆ.

32 ವರ್ಷದ ಪೂನಂ ಪಾಂಡೆ ಗರ್ಭಕಂಠದ ಕ್ಯಾನ್ಸರ್ ಎದುರಿಸುತ್ತಿದ್ದರು. ಈ ವಿಷಯವನ್ನು ನಟಿಯ ತಂಡ ತನ್ನ ಹೇಳಿಕೆಯಲ್ಲಿ ಬಹಿರಂಗಪಡಿಸಿದೆ.

ಪೂನಂ ಪಾಂಡೆ ತಂಡವು ತನ್ನ ಅಧಿಕೃತ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹೇಳಿಕೆಯನ್ನು ನೀಡಲಾಗಿದ್ದು ಅದರಲ್ಲಿ ‘ನಮ್ಮ ಪ್ರೀತಿಯ ಪೂನಂ ಅವರನ್ನು ಗರ್ಭಕಂಠದ ಕ್ಯಾನ್ಸರ್‌ನಿಂದ ಕಳೆದುಕೊಂಡಿದ್ದೇವೆ ಎಂದು ಘೋಷಿಸಲು ನಮಗೆ ದುಃಖವಾಗಿದೆ ಎಂದು ಬರೆದುಕೊಂಡಿದ್ದಾರೆ.

ನಟಿಯ ಸಾವಿನ ಸುದ್ದಿ ಕೇಳಿ ಅಭಿಮಾನಿಗಳು ತೀವ್ರ ಆಘಾತಕ್ಕೆ ಒಳಗಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡುವ ಮೂಲಕ ತಮ್ಮ ದುಃಖವನ್ನು ವ್ಯಕ್ತಪಡಿಸುತ್ತಿದ್ದಾರೆ.