ನವವಿವಾಹಿತೆ ಆತ್ಮಹತ್ಯೆಗೆ ಶರಣು

ಪುತ್ತೂರು: ನವವಿವಾಹಿತೆಯೊಬ್ಬರು ನೇಣು ಬಿಗಿದು ಮನೆಯಲ್ಲಿ ಆತ್ಯಹತ್ಯೆ ಮಾಡಿಕೊಂಡ ಘಟನೆ ದ.ಕ. ಜಿಲ್ಲೆಯ ಪುತ್ತೂರು ತಾಲೂಕಿನ ಕುರಿಯ ಗಡಾಜೆ ಎಂಬಲ್ಲಿ ಸಂಭವಿಸಿದೆ.

ಆತ್ಮಹತ್ಯೆಗೆ ಶರಣಾದವರು ಬೆಳ್ತಂಗಡಿ ತಾಲೂಕಿನ ಉರುವಾಲು ಗ್ರಾಮದ ಕುಕ್ಕಾಜೆ ರಾಮ್ಮಣ್ಣ ಗೌಡ ಮತ್ತು ಪುಷ್ಪ ದಂಪತಿ ಪುತ್ರಿ ಶೋಭಾ (26) ಎಂದು ತಿಳಿದು ಬಂದಿದೆ.

ಶೋಭಾ ಅವರನ್ನು ಕಳೆದ ಒಂದೂವರೆ ತಿಂಗಳ ಹಿಂದೆ ಪುತ್ತೂರು ಕುರಿಯ ಗಡಾಜೆ ರೋಹಿತ್ ರವರಿಗೆ ಮದುವೆ ಮಾಡಿ ಕೊಡಲಾಗಿತ್ತು. ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸಾವಿಗೆ ಕಾರಣ ತನಿಖೆಯಿಂದ ತಿಳಿಯಬೇಕಾಗಿದೆ. ಪುತ್ತೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.