ಉಡುಪಿ: ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉಡುಪಿ ಜಿಲ್ಲೆಯ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ.
ರಾಜ್ಯದಲ್ಲೇ ಉಡುಪಿ ಜಿಲ್ಲೆ ಮೊದಲ ಸ್ಥಾನದಲ್ಲಿದೆ. ಆಸ್ತಿ. ಎಸ್ ಶೆಟ್ಟಿ ರಾಜ್ಯಕ್ಕೆ ನಾಲ್ಕನೇ ರ್ಯಾಂಕ್ ಗಳಿಸಿದ್ದು, ಇವರು ಉಡುಪಿ ಜಿಲ್ಲೆಯ ಕಾರ್ಕಳದ ಜ್ಞಾನಸುಧಾ ಕಾಲೇಜಿನ ವಿದ್ಯಾರ್ಥಿನಿ. ಆಸ್ತಿ ಎಸ್ ಶೆಟ್ಟಿ ಪಿಯುಸಿ ವಿಜ್ಞಾನ ವಿಭಾಗದಲ್ಲಿ 596 ಅಂಕ ಗಳಿಸಿದ್ದಾರೆ. ಭೂಮಿಕಾ ಆರ್ ಹೆಗ್ಡೆ ರಾಜ್ಯಕ್ಕೆ ಐದನೇ ರ್ಯಾಂಕ್ ಗಳಿಸಿದ್ದು, ಇವರು ಉಡುಪಿಯ ಎಂಜಿಎಂ ಕಾಲೇಜಿನ ವಿದ್ಯಾರ್ಥಿನಿ. ಭೂಮಿಕ ಆರ್ ಹೆಗ್ಡೆಗೆ ಪಿಯುಸಿಯಲ್ಲಿ 595 ಅಂಕಬಂದಿದೆ. ಕಾಮರ್ಸ್ ವಿಭಾಗದಲ್ಲಿ ಸಹನಾ ನಾಯಕ್ 594 ಅಂಕ ಗಳಿಸಿ ರಾಜ್ಯಕ್ಕೆ 6ನೇ ರ್ಯಾಂಕ್ ಪಡೆದಿದ್ದಾರೆ. ಇವರು ಕಾರ್ಕಳದ ಜ್ಞಾನಸುಧಾ ಕಾಲೇಜಿನ ವಿದ್ಯಾರ್ಥಿನಿ.ಇನ್ನು ಉಡುಪಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಅಪೂರ್ವ್ ವಿ. ಕುಮಾರ್ ವಿಜ್ಞಾನ ವಿಭಾಗದಲ್ಲಿ 595 ಅಂಕಗಳನ್ನು ಪಡೆದು ಸಾಧನೆ ಮಾಡಿದ್ದಾನೆ.












