ಪುತ್ತೂರು: ಬಸ್ ಹಾಗೂ ಬೈಕ್ ನಡುವೆ ಅಪಘಾತ: ಬೈಕ್ ಸವಾರ ಮೃತ್ಯು.

ಪುತ್ತೂರು: ಪುರುಷರಕಟ್ಟೆಯಲ್ಲಿ ಸರ್ಕಾರಿ ಬಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.

ವಿಟ್ಲ ಸಮೀಪದ ಕುಂಡಡ್ಕ ನಿವಾಸಿ ಮೋಕ್ಷಿತ್ ಗೌಡ (23) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಪುರುಷರಕಟ್ಟೆಯಲ್ಲಿ ರೂಂ ಮಾಡಿಕೊಂಡು ಉಳಿದುಕೊಂಡಿದ್ದ ಮೋಕ್ಷಿತ್ ಸರ್ವಿಸ್ ಗೆ ಇಟ್ಟಿದ್ದ ತನ್ನ ಬೈಕನ್ನು ವಾಪಾಸು ತರುತ್ತಿದ್ದ ವೇಳೆ ಕಾಣಿಯೂರು ಸುಬ್ರಹ್ಮಣ್ಯ ರಸ್ತೆಯಲ್ಲಿ ಈ ಅವಘಡ ಸಂಭವಿಸಿದೆ ಎಂದು ತಿಳಿದು ಬಂದಿದೆ.

ಘಟನಾ ಸ್ಥಳಕ್ಕೆ ಪುತ್ತೂರು ಸಂಚಾರಿ ಠಾಣೆಯ ಪೊಲೀಸರು ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.