ಪುಸ್ತಕ ಬಹುಮಾನ : ಕೃತಿಗಳ ಆಹ್ವಾನ

ಉಡುಪಿ: ಕರ್ನಾಟಕ ಸಾಹಿತ್ಯ ಅಕಾಡೆಮಿಯ
ವತಿಯಿಂದ ೨೦೨೩ ನೇ ಸಾಲಿನಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟಗೊಂಡಿರುವ ಸಾಹಿತ್ಯದ ವಿವಿಧ ಪ್ರಕಾರಗಳ ಕೃತಿಗಳನ್ನು ಪುಸ್ತಕ ಬಹುಮಾನಕ್ಕಾಗಿ ಆಹ್ವಾನಿಸಲಾಗಿದೆ.ಲೇಖಕರು, ಪ್ರಕಾಶಕರು, ಸಾಹಿತ್ಯಾಸಕ್ತರು ಹಾಗೂ ಸಾರ್ವಜನಿಕರು ಪುಸ್ತಕದ ನಾಲ್ಕು ಪ್ರತಿಗಳನ್ನು ರಿಜಿಸ್ಟ್ರಾರ್ , ಕರ್ನಾಟಕ ಸಾಹಿತ್ಯ ಅಕಾಡೆಮಿ, ಕನ್ನಡ ಭವನ, ಜೆ.ಸಿ ರಸ್ತೆ, ಬೆಂಗಳೂರು ಈ ವಿಳಾಸಕ್ಕೆ ರಿಜಿಸ್ರ‍್ಡ್ ಅಂಚೆ/ ಕೊರಿಯರ್ ಮೂಲಕ
ಅಥವಾ ಖುದ್ದಾಗಿ ಆಗಸ್ಟ್ ೩೧ ರ ಒಳಗಾಗಿ ಸಲ್ಲಿಸಬೇಕು.ಹೆಚ್ಚಿನ ಮಾಹಿತಿಗಾಗಿ ಅಕಾಡೆಮಿಯ ವೆಬ್‌ಸೈಟ್ www.sahithyaacademy.karnataka.govt.in ಅನ್ನು ಸಂಪರ್ಕಿಸಬಹುದಾಗಿದೆ ಎಂದು ಅಕಾಡೆಮಿಯ ರಿಜಿಸ್ಟಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.