ಪ್ರೋತ್ಸಾಹಧನ: ಅರ್ಜಿ ಆಹ್ವಾನ

ಉಡುಪಿ: 2023-24 ನೇ ಸಾಲಿನಲ್ಲಿ ಜಿಲ್ಲೆಯ ಕೊರಗ ಸಮುದಾಯದ 7 ನೇ ಹಾಗೂ 10 ನೇ ತರಗತಿ ಉತ್ತೀರ್ಣರಾದ ವಿದ್ಯಾರ್ಥಿಗಳಿಂದ ಆದಿವಾಸಿ ವಿಶೇಷ ಪ್ರೋತ್ಸಾಹಧನಕ್ಕಾಗಿ ಹಾಗೂ 10 ನೇ ತರಗತಿ ಹಾಗೂ ಅದರ ನಂತರದ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಂದ ವಿಶೇಷ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ನಮೂನೆಯನ್ನು ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ ಕಚೇರಿಗಳಲ್ಲಿ, ಸಮಾಜ ಕಲ್ಯಾಣ ಇಲಾಖೆಯ ಉಡುಪಿ, ಕುಂದಾಪುರ ಹಾಗೂ ಕಾರ್ಕಳದ ಸಹಾಯಕ ನಿರ್ದೇಶಕರ ಕಛೇರಿಯಲ್ಲಿ, ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯತ್ ಕಚೇರಿಗಳಲ್ಲಿ ಹಾಗೂ ಐ.ಟಿ.ಡಿ.ಪಿ. ಯ ಯೋಜನಾ ಸಮನ್ವಯಾಧಿಕಾರಿಗಳ ಕಛೇರಿ ಯಲ್ಲಿ ಪಡೆಯಬಹುದಾಗಿದೆ.

ಅರ್ಜಿ ಸಲ್ಲಿಸಲು ಜೂನ್ 15 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಯೋಜನಾ ಸಮನ್ವಯಾಧಿಕಾರಿ, ಸಮಗ್ರ ಗಿರಿಜನ ಅಭಿವೃಧ್ಧಿ ಯೋಜನೆ, ಕೊಠಡಿ ಸಂಖ್ಯೆ:310, ಬಿ ಬ್ಲಾಕ್, ಎರಡನೇ ಮಹಡಿ, ಜಿಲ್ಲಾ ಸಂಕೀರ್ಣ, ರಜತಾದ್ರಿ, ಮಣಿಪಾಲ ದೂಂ.ಸA: 0820- 2574814 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.