ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಿಗೆ “ಲೈನ್ ಫಾಲೋವರ್” ತಾಂತ್ರಿಕ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ.

ಉಡುಪಿ: ಬಂಟಕಲ್ಲಿನ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಮತ್ತು ಡಾಟಾ ಸೈನ್ಸ್ ವಿಭಾಗದ ಪ್ರಥಮ ವರ್ಷದ ವಿದ್ಯಾರ್ಥಿಗಳಾದ ಯು ಪ್ರದ್ಯುನ್ಮಾ ಉಪಾಧ್ಯಾಯ, ಶ್ರೀಕಿರಣ್ ಭಟ್, ಸಾತ್ವಿಕ್ ಭಟ್ ಮತ್ತು ಸೃಜನ್ ನಾಯರಿ ಇವರು ದಿನಾಂಕ 29 ಏಪ್ರೀಲ್ 2024 ರಂದು ಯೆನಪೋಯ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ನಡೆದ ರಾಷ್ಟ್ರಮಟ್ಟದ ರೋಬೋ ಸ್ಪರ್ಧೆ “ಯೆಂಟೆಕ್‍ಮೇನಿಯಾ ರೋಬೋ ಫ್ಯೂಷನ್” ನ ಲಕ್ಷ್ಮಣ್ ರೀಖಾ (ಲೈನ್ ಫಾಲೋವರ್) ತಾಂತ್ರಿಕ ಸ್ಪರ್ಧೆಯಲ್ಲಿ ಭಾಗವಹಿಸಿ ಫ್ರಥಮ ಸ್ಥಾನಗಳಿಸಿದ್ದಾರೆ. ಈ ಸ್ಪರ್ಧೆಯಲ್ಲಿ ಒಟ್ಟು ಹನ್ನೆರಡು ವಿದ್ಯಾರ್ಥಿಗಳ ತಂಡಗಳು ಭಾಗವಹಿಸಿದ್ದವು.

ವಿದ್ಯಾರ್ಥಿಗಳ ಈ ಸಾಧನೆಗೆ ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರು ಮತ್ತು ಶಿಕ್ಷಕ ಹಾಗೂ ಶಿಕ್ಷಕೇತರ ಸಿಬ್ಬಂದಿ ವರ್ಗದವರು ಶುಭಹಾರೈಸಿದ್ದಾರೆ.