ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

ಉಡುಪಿ:ಬಂಟಕಲ್‌ನ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಸಹಪಠ್ಯೇತರ ಘಟಕ ಮತ್ತು ಸಾಂಸ್ಕ್ರತಿಕ ಘಟಕದ ಸಹಯೋಗದೊಂದಿಗೆ ಡಾ. ಸರ್ವೇಪಳ್ಳಿ ರಾಧಾಕೃಷ್ಣನ್ ಅವರ ಜನ್ಮದಿನದ ನೆನಪಿಗಾಗಿ ಶಿಕ್ಷಕರ ದಿನಾಚರಣೆಯನ್ನು ದಿನಾಂಕ 05
ಸೆಪ್ಟೆಂಬರ್ 2024 ಆಚರಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಉಡುಪಿಯ ಪೂರ್ಣಪ್ರಜ್ಞ ಕಾಲೇಜಿನ ನಿವೃತ್ತ ಪ್ರಾಂಶುಪಾಲರು ಪ್ರೊಫೆಸರ್ ಕೆ ಸದಾಶಿವ ರಾವ್
ಮಾತನಾಡಿ ಭಾರತೀಯ ನಾಗರೀಕತೆಯನ್ನು ಕಾಪಾಡುವಲ್ಲಿ ಶಿಕ್ಷಕರ ಪಾತ್ರ ಮಹತ್ತರವಾದುದು, ಶಿಕ್ಷಕರು ತಮ್ಮ ವೃತ್ತಿಯನ್ನು ಕೇವಲ ಸಂಪಾದನೆಯ ದೃಷ್ಟಿಯಿಂದ ನೋಡದೆ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ನೀಡಿ ಅವರ ಭವಿಷ್ಯ ರೂಪಿಸುವ ಕೆಲಸವನ್ನು ಮಾಡಬೇಕೆಂದು ತಿಳಿಸಿದರು. ವಿದ್ಯಾರ್ಥಿಗಳು ತಮ್ಮ ಪೋಷಕರನ್ನು ಮತ್ತು ಶಿಕ್ಷಕರನ್ನು ಗೌರವದಿಂದ ಕಾಣಬೇಕು ಎಂದರು. ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯ ಅತಿಥಿಗಳು, ವಿದ್ಯಾರ್ಥಿಗಳಲ್ಲಿ ಸ್ಫೂರ್ತಿ ತುಂಬಲು ತಮ್ಮ ನಿಜ ಜೀವನದ ಘಟನೆಯನ್ನು ಹಂಚಿಕೊಂಡರು.

ಸಂಸ್ಥೆಯ ಪ್ರಾಂಶುಪಾಲರಾದ ಡಾ. ತಿರುಮಲೇಶ್ವರ ಭಟ್ ಅವರು ಮಾತನಾಡಿ ಗುಣಮಟ್ಟದ ಶಿಕ್ಷಣದ ಮಹತ್ವ ಮತ್ತು ಸದೃಢ ಸಮಾಜ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರದ ಬಗ್ಗೆ ತಿಳಿಸಿದರು ಹಾಗೂ
ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಉತ್ತಮ ಮೌಲ್ಯವನ್ನು ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಾದ ಮಾನ್ಯ ಪ್ರಾರ್ಥಿಸಿ, ಕಾತ್ಯಾಯಿನಿ ಕಾರ್ಯಕ್ರಮವನ್ನು ನಿರೂಪಿಸಿದರು. ಶಿಕ್ಷಕರ ದಿನಾಚರಣೆಯ
ಅಂಗವಾಗಿ ಶಿಕ್ಷಕರಿಗೆ ಕೆಲವೊಂದು ಸ್ಪರ್ಧೆಯನ್ನು
ಆಯೋಜಿಸಲಾಗಿತ್ತು.