ಬಂಟಕಲ್ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡಿಗೆ ಸಮಾರಂಭ.

ಉಡುಪಿ: ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ 11ನೇ ವರ್ಷದ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡಿಗೆ ಸಮಾರಂಭವು ದಿನಾಂಕ 11 ಮೇ 2024 ರಂದು ಕಾಲೇಜಿನ ಆವರಣದಲ್ಲಿ ಆಯೋಜಿಸಲಾಗಿತ್ತು.

ಸಂಸ್ಥೆಯ ಕಾರ್ಯದರ್ಶಿಗಳಾದ ಶ್ರೀ ರತ್ನಕುಮಾರ್ ಈ ಸಮಾರಂಭದ ಮುಖ್ಯ ಅಥಿತಿಗಳಾಗಿ ಮಾತನಾಡಿ ವಿದ್ಯಾರ್ಥಿಗಳ ಸಾಧನೆಗಳು ಸಂಸ್ಥೆಗೆ ಒಂದು ಉತ್ತಮ ಜಾಹೀರಾತುಗಳಾಗಿವೆ, ವಿದ್ಯಾರ್ಥಿಗಳ ಉತ್ತಮ ನಡವಳಿಕೆ ಸಂಸ್ಥೆಯ ಕಾರ್ಯಕ್ಷಮತೆಯನ್ನು ಪ್ರತಿಬಿಂಬಿಸುತ್ತದೆ ಎಂದು ತಿಳಿಸಿದರು. ಪಧವೀದರರು ಸಮಾಜದ ಎಲ್ಲಾ ಸವಾಲುಗಳನ್ನು ಎದುರಿಸಲು ಬೇಕಾಗುವಂತಹ ಕೌಶಲ್ಯವನ್ನು ಹೊಂದಬೇಕು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಪ್ರತೀ ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿಗಳ ಎರಡು ಉತ್ತಮ ಪ್ರಾಜೆಕ್ಟ್‍ಗಳಿಗೆ ಬಹುಮಾನ ನೀಡಿಲಾಯಿತು.

ಪ್ರಾಂಶುಪಾಲರಾದ ಡಾ. ತಿರುಮಲೇಶ್ವರ ಭಟ್ ಬೀಳ್ಕೊಡುಗೆ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು ಮತ್ತು ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕಾಗಿ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಡೀನ್‍ಗಳು ವಿವಿದ ವಿಭಾಗದ ಮುಖ್ಯಸ್ಥರು, ಅಧ್ಯಾಪಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.