ಬಂಟ್ವಾಳ: ಬಸ್ ಢಿಕ್ಕಿಯಾಗಿ ವೃದ್ದ ಮೃತ್ಯು.

ಬಂಟ್ವಾಳ: ಸಮೀಪ ರಸ್ತೆ ದಾಟುತ್ತಿದ್ದ ವೃದ್ದರೋರ್ವರಿಗೆ ಬಸ್ ಢಿಕ್ಕಿಯಾಗಿ ಮೃತಪಟ್ಟ ಘಟನೆ ರವಿವಾರ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತುಂಬೆಯಲ್ಲಿ ಸಂಭವಿಸಿದೆ.

ಮೃತಪಟ್ಟ ವ್ಯಕ್ತಿ ತುಂಬೆ ಸಮೀಪದ ಮುದಲ್ಮೆಪಡ್ಪು ನಿವಾಸಿ ಸೇಸಪ್ಪ ಪೂಜಾರಿ (89) ಎಂದು ತಿಳಿಯಲಾಗಿದೆ.

ಮನೆಗೆ ಸಾಮಾಗ್ರಿಗಳನ್ನು ತರುವ ಉದ್ದೇಶದಿಂದ ತುಂಬೆ ಪೇಟೆಗೆ ಹೋಗುತ್ತಿದ್ದ ಸೇಸಪ್ಪ ಅವರು ವೈಶಾಲಿ ಹೋಟೆಲ್ ಮುಂಭಾಗದಲ್ಲಿ ರಸ್ತೆ ದಾಟುತ್ತಿದ್ದ ವೇಳೆ ಮಂಗಳೂರು ಕಡೆಯಿಂದ ಧರ್ಮಸ್ಥಳ ಕಡೆಗೆ ಹೋಗುತ್ತಿದ್ದ ಸರಕಾರಿ ಬಸ್ ಢಿಕ್ಕಿಯಾಗಿದೆ.

ಢಿಕ್ಕಿಯ ರಭಸಕ್ಕೆ ತಲೆ ಹಾಗೂ ಮುಖಕ್ಕೆ ಗಂಭೀರವಾಗಿ ಗಾಯವಾಗಿತ್ತು. ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಅದಾಗಲೇ ಅವರು ಮೃತಪಟ್ಟ ‌ಬಗ್ಗೆ ವೈದ್ಯರು ತಿಳಿಸಿದ್ದಾರೆ.