ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿ., ಉಡುಪಿ: ಚೇತನಾ ನವೋದಯ ಸ್ವಸಹಾಯ ಗುಂಪುಗಳ ಮಾಹಿತಿ ಕಾರ್ಯಾಗಾರ

ಉಡುಪಿ: ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಹೆಸರುವಾಸಿಯಾಗಿರುವ ಉಡುಪಿಯ ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಚೇತನಾ ಸ್ವಸಹಾಯ ಗುಂಪುಗಳ ಸದಸ್ಯರ ಮಾಹಿತಿ ವಿನಿಮಯ ಕಾರ್ಯಾಗಾರವು ಸಂಘದ ಜಗನ್ನಾಥ ಸಭಾಭವನದಲ್ಲಿ ಜರಗಿತು. ಸ್ವಸಹಾಯ ಗುಂಪುಗಳ ಬಲವರ್ಧನೆಗಾಗಿ ಹಮ್ಮಿಕೊಂಡ ಈ ಮಾಹಿತಿ ಕಾರ್ಯಾಗಾರದಲ್ಲಿ ಸುಮಾರು 100 ಸ್ವಸಹಾಯ ಗುಂಪುಗಳ ಸದಸ್ಯರು ಭಾಗವಹಿಸಿ ಮಾಹಿತಿ ಪಡೆದರು. ನವೋದಯ ಸ್ವಸಹಾಯ ಗುಂಪುಗಳ ಮೇಲ್ವಿಚಾರಕರಾದ ಹರಿನಾಥ್‍ರವರು ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ನವೋದಯ ಸ್ವಸಹಾಯ ಗುಂಪುಗಳ ಕೋ-ಆರ್ಡಿನೇಟರ್‍ಗಳಾದ ಕೃಷ್ಣ ನಾಯ್ಕ್, ಸುಮಿತ್ರಾ, ಗೀತಾ ಶೆಟ್ಟಿ, ಸೊಸೈಟಿಯ ಅಧ್ಯಕ್ಷರಾದ ಜಯಕರ ಶೆಟ್ಟಿ ಇಂದ್ರಾಳಿ, ಉಪಾಧ್ಯಕ್ಷರಾದ ಜಾರ್ಜ್ ಸಾಮ್ಯುವೆಲ್, ಪ್ರಧಾನ ವ್ಯವಸ್ಥಾಪಕರಾದ ರಾಜೇಶ್ ವಿ. ಶೇರಿಗಾರ್ ಉಪಸ್ಥಿತರಿದ್ದರು. ಸಹಾಯಕ ಪ್ರಧಾನ ವ್ಯವಸ್ಥಾಪಕರಾದ ಪ್ರವೀಣ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು.