ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ನೇತೃತ್ವದಲ್ಲಿ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಕಾರ್ಯಕರ್ತರ ಸಭೆ.

ಮಂಗಳೂರು: ನೈರುತ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ದಕ್ಷಿಣ ಕನ್ನಡ ಜಿಲ್ಲೆಯ ಕಾರ್ಯಕರ್ತರ ಸಭೆಯು ಇಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ ಅವರ ನೇತೃತ್ವದಲ್ಲಿ ನಡೆಯಿತು.

ಈ ಸಂದರ್ಭ ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಸುನಿಲ್ ಕುಮಾರ್ ಕಾರ್ಕಳ, ನೈರುತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಡಾ.ಧನಂಜಯ ಸರ್ಜಿ, ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಎಸ್ ಎಲ್ ಭೋಜೇಗೌಡ, ಬಿಜೆಪಿ ದಕ್ಷಿಣ ಕನ್ನಡ ಜಿಲ್ಲೆಯ ಲೋಕಸಭಾ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟಾ, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಶಾಸಕರುಗಳಾದ ಉಮಾನಾಥ ಕೋಟ್ಯಾನ್, ರಾಜೇಶ್ ನಾಯ್ಕ್ ಯು, ಹರೀಶ್ ಪೂಂಜಾ, ಮಂಗಳೂರು ಬಿಜೆಪಿ ವಿಭಾಗ ಪ್ರಭಾರಿ ಉದಯ್ ಕುಮಾರ್ ಶೆಟ್ಟಿ, ಜಿಲ್ಲಾ ಸಹಪ್ರಭಾರಿ ರಾಜೇಶ್ ಕಾವೇರಿ, ಬಿಜೆಪಿ ಪ್ರಮುಖರಾದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಬಿಜೆಪಿ ಪ್ರಮುಖರು ಮತ್ತು ಜೆಡಿಎಸ್ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.