ಬೆಂಗಳೂರು: ಬಿಜೆಪಿ ನಾಯಕಿ ಆತ್ಮಹತ್ಯೆಗೆ ಶರಣು.

ಬೆಂಗಳೂರು: ಬೆಂಗಳೂರಿನಲ್ಲಿ ಬಿಜೆಪಿ ನಾಯಕಿ ಮಂಜುಳ ಎಂಬುವರು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಬಿಜೆಪಿ ಮಲ್ಲೇಶ್ವರಂ ಮಂಡಲ ಕಾರ್ಯದರ್ಶಿಯಾಗಿದ್ದ ಮಂಜುಳಾ ಅವರು ಮತ್ತಿಕೆರೆಯ ತಮ್ಮ ನಿವಾಸದಲ್ಲಿ ಮಧ್ಯಾಹ್ನ 2:30ರ ಸುಮಾರಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ನನ್ನ ಸಾವಿಗೆ ನಾನೇ ಕಾರಣ ಎಂದು ಡೆತ್ ನೋಟ್ ನಲ್ಲಿ ಬರೆದಿಟ್ಟಿದ್ದಾರೆ.

ಯಶವಂತಪುರ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮರಣೋತ್ತರ ಪರೀಕ್ಷೆಗೆ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ಮೃತದೇಹವನ್ನು ರವಾನಿಸಲಾಗಿದೆ. ಮಂಜುಳಾ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ ಎನ್ನಲಾಗಿದೆ.