ಬೆಳೆ ಹಾನಿ ಪರಿಹಾರ: ಸಹಾಯವಾಣಿ ಸ್ಥಾಪನೆ

ಉಡುಪಿ: ಜಿಲ್ಲೆಯಲ್ಲಿ ಬೆಳೆ ಸಮೀಕ್ಷೆ ದತ್ತಾಂಶದ ಮಾಹಿತಿಯ ಆಧಾರದ ಮೇಲೆ ಫ್ರೂಟ್ಸ್ ಐಡಿ ಹೊಂದಿರುವ, ಪಹಣಿ ಜೋಡಣೆಯಾಗಿರುವ ರೈತರಿಗೆ ಪರಿಹಾರ ತಂತ್ರಾ೦ಶದ ಮೂಲಕ ಹಂತ -ಹಂತವಾಗಿ ಪರಿಹಾರ ಪಾವತಿಸುವ ಪ್ರಕ್ರಿಯೆಯು ಪ್ರಾರಂಭವಾಗಿದ್ದು, ಬೆಳೆ ಹಾನಿ ಪರಿಹಾರದ ಬಗ್ಗೆ ರೈತರಿಗೆ ಮಾಹಿತಿ ನೀಡಲು ಜಿಲ್ಲಾಧಿಕಾರಿಗಳ ಕಚೇರಿ, ಉಪವಿಭಾಗಾಧಿಕಾರಿಗಳ ಕಚೇರಿ ಹಾಗೂ ತಾಲೂಕು ಕಚೇರಿಗಳಲ್ಲಿ ಸಹಾಯವಾಣಿಗಳನ್ನು ಪ್ರಾರಂಭಿಸಿ, ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ನಿಯೋಜಿಸಲಾಗಿರುತ್ತದೆ.

ಉಡುಪಿಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಲಿಖಿತ ಸ್ವಾಮಿ ಬಿ.ವಿ ಹಾಗೂ ರವಿ ಓಜನಹಳ್ಳಿ ಅವರನ್ನು ನೇಮಿಸಲಾಗಿದ್ದು, ಸಹಾಯವಾಣಿ ಸಂಖ್ಯೆ: ಟೋಲ್ ಫ್ರೀ ನಂಬರ್ 1077, 0820-2574802, ಕುಂದಾಪುರ ಉಪವಿಭಾಗಾಧಿಕಾರಿಗಳ ಕಚೇರಿಯಲ್ಲಿ ಭವ್ಯ ಸಹಾಯವಾಣಿ ಸಂಖ್ಯೆ: 08254-200816, ಕಾರ್ಕಳ ತಾಲೂಕು ತಹಶೀಲ್ದಾರರ ಕಚೇರಿಯಲ್ಲಿ ಮಧುಶ್ರೀ ಸಹಾಯವಾಣಿ ಸಂಖ್ಯೆ: 08258-230201, ಹೆಬ್ರಿ ತಾಲೂಕು ತಹಶೀಲ್ದಾರರ ಕಚೇರಿಯಲ್ಲಿ ವಿನುತಾ ಸಹಾಯವಾಣಿ ಸಂಖ್ಯೆ: 08253-2550201 ಹಾಗೂ ಬ್ರಹ್ಮಾವರ ತಾಲೂಕು ತಹಶೀಲ್ದಾರರ ಕಚೇರಿಯಲ್ಲಿ ಶಶಿಕಿರಣ್ ಸಹಾಯವಾಣಿ ಸಂಖ್ಯೆ: 0820-2560494 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.