ಬೆಳ್ತಂಗಡಿ: ಪಿಕಪ್ ವಾಹನ ಢಿಕ್ಕಿ – ವ್ಯಕ್ತಿ ಮೃತ್ಯು

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಸಮೀಪದ ಶಿಬಾಜೆ ಗ್ರಾಮದ ತಂಬ್ಲಾಜೆಯಲ್ಲಿ ಪಿಕಪ್‌ ವಾಹನವೊಂದು ಹಿಮ್ಮುಖವಾಗಿ ಚಲಿಸಿದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ಸಂಭವಿಸಿದೆ.

ರುಕ್ಮ ಮುಗೇರ ಹಾಗೂ ನಾಗೇಶ್‌ ಅವರು ಪಿಕಪ್‌ ವಾಹನದಲ್ಲಿ ಗೊಬ್ಬರ ಲೋಡ್‌ ಮಾಡಿಕೊಂಡು ಬರಲು ತೆರಳಿದ್ದರು. ಈ ವೇಳೆ ಶಿಬಾಜೆ ಬಳಿ ನಿಲ್ಲಿಸಿದಾಗ ರುಕ್ಮ ಮುಗೇರ ರಸ್ತೆಯ ಬದಿಯಲ್ಲಿ ನಿಂತುಕೊಂಡಿದ್ದರು. ಅದರ ಚಾಲಕ ಜಯೇಶ್‌ ಅವರು ದುಡುಕುತನದಿಂದ ಹಿಮ್ಮುಖವಾಗಿ ಚಲಾಯಿಸಿ, ರಸ್ತೆಯ ಬದಿಯಲ್ಲಿ ನಿಂತುಕೊಂಡಿದ್ದ ರುಕ್ಮ ಮುಗೇರ ಅವರಿಗೆ ಢಿಕ್ಕಿ ಹೊಡೆದಿದೆ.

ಅಪಘಾತದ ಪರಿಣಾಮ, ರುಕ್ಮ ಮುಗೇರ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡರು ತತ್‌ಕ್ಷಣ ಅವರಿಗೆ ಉಜಿರೆಯ ಎಸ್‌ಡಿಎಂ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಬೇರೆ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ.

ಈ ಬಗ್ಗೆ ಬೆಳ್ತಂಗಡಿ ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.